ಡಿಪ್ಲೊಮಾ ಪರೀಕ್ಷಾರ್ಥಿಗಳ ಗಮನಕ್ಕೆ..

exam
Published on

ಬೆಂಗಳೂರು: ಡಿಪ್ಲೊಮಾ ಅಂತಿಮ ವರ್ಷದ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟದ ವಸತಿ ನಿಯಮಗಳಲ್ಲಿ ಉಳಿದು ಕೊಳ್ಳಲು ವ್ಯವಸ್ಥೆ ಮಾಡಬೇಕು ಎಂದು ತಾಂತ್ರಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಸೆ.7ರಿಂದ 28ರವರೆಗೆ ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷೆಗಳು ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪಾಲಿಟೆಕ್ನಿಕ್​ಗಳಲ್ಲಿ ನಡೆಯಲಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ವಸತಿ ನಿಲಯದ ವಿದ್ಯಾರ್ಥಿಗಳಾಗಿರುತ್ತಾರೆ. ಕರೊನಾ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮದೊಂದಿಗೆ ವಿದ್ಯಾರ್ಥಿಗಳಿಗೆ ವಸತಿ ನಿಲಯದಲ್ಲಿ ತಂಗಲು ವ್ಯವಸ್ಥೆ ಮಾಡಬೇಕು.

ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವೃತ್ತಿನಿರತ ವಸತಿ ನಿಲಯಗಳ ಸ್ಥಳೀಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ತಾಂತ್ರಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net