ಸೆಟ್ಟೇರುವ ಮುನ್ನವೇ ವಿವಾದದ ಸುಳಿಯಲ್ಲಿ ಮೊನಾಲಿಸಾ ನಟನೆಯ ಸಿನಿಮಾ; ಐವರ ವಿರುದ್ಧ ಎಫ್​ಐಆರ್ ದಾಖಲು

Monalisa
Published on

ಮುಂಬೈ: ತನ್ನ ಕಣ್ಣಿನ ಮೂಲಕವೇ ವೈರಲ್ ಆಗಿ ದೇಶದಾದ್ಯಂತ ಸಖತ್ ಸೌಂಡ್ ಮಾಡುತ್ತಿರುವ ಮೊನಾಲಿಸಾ (Monalisa) ಪ್ರತಿನಿತ್ಯ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ಮಹಾಕುಂಭಮೇಳದಿಂದ ಹೆಚ್ಚು ಖ್ಯಾತಿ ಪಡೆದ ಮೊನಾಲಿಸಾ ಭೋಂಸ್ಲೆ ಅವರ ಮಾನಹಾನಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಚಿತ್ರದ ನಿರ್ದೇಶಕರೊಬ್ಬರು ಪೊಲೀಸ್ ಠಾಣೆ ಮೇಟ್ಟಿಲೇರಿದ್ದು, ಯೂಟ್ಯೂಬರ್​ ಸೇರಿದಂತೆ ಐದು ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಮಹಾಕುಂಭಮೇಳದ ಮೂಲಕ ವೈರಲ್ ಆದ ಬೆಡಗಿ ಮೊನಾಲಿಸಾಗೆ (Monalisa) ಚಿತ್ರರಂಗದಿಂದ ಸಾಕಷ್ಟು ಆಫರ್ ಬರುತ್ತಿದೆ. ಅವರು ಈಗಾಗಲೇ ಹಿಂದಿ ಚಿತ್ರವನ್ನು ಒಪ್ಪಿಕೊಂಡು ಸಹಿ ಹಾಕಿದ್ದು, ಸಂಭಾವನೆಯನ್ನು ಕೂಡ ಪಡೆದಿದ್ದಾರೆ. ಆದರೆ ಅವರ ಸಿನಿಮಾಗೆ ಕೆಲವರು ಅಡ್ಡಗಾಲು ಹಾಕುತ್ತಿದ್ದಾರೆ ಮತ್ತು ಇಲ್ಲಸಲ್ಲದ ಹೇಳಿಕೆಗಳನ್ನು ಕೊಡುವ ಮೂಲಕ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಿನಿಮಾದ ನಿರ್ದೇಶಕ ಸನೋಜ್ ಮಿಶ್ರಾ ಯೂಟ್ಯೂಬರ್ ಸೇರಿದಂತೆ ಐದು ಮಂದಿ ವಿರುದ್ಧ ದೂರು ದಾಖಲಿಸಿದ್ದಾರೆ.

monalisa

ಮುಂಬೈನ ಅಂಬೋಲಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಯೂಟ್ಯೂಬರ್ ಸೇರಿದಂತೆ ಐದು ಮಂದಿ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ. ದೂರಿನ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದು, ತನಿಖೆ ಯಾವ ಹಂತದಲ್ಲಿದೆ ಎಂಬುದರ ಮಾಹಿತಿಯನ್ನು ರಿವೀಲ್ ಮಾಡಿಲ್ಲ.

ದೂರಿನಲ್ಲಿ ಏನಿದೆ? 

ಮೊನಾಲಿಸಾ (Moanlisa)  ನಟಿಸಬೇಕಿರುವ ಸಿನಿಮಾಗೆ ‘ದಿ ಡೈರಿ ಆಫ್ ಮಣಿಪುರ್’ ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾದ ಬಜೆಟ್​​ ವಿಚಾರದಲ್ಲೂ ಗೋಲ್ ಮಾಲ್ ಆಗುತ್ತಿದೆ ಎಂದು ಐವರು ಆರೋಪ ಹೊರಿಸಿದ್ದಾರೆ. ಮಿಶ್ರಾ ನಿರ್ದೇಶಿಸಿದ ಯಾವುದೇ ಸಿನಿಮಾಗಳು ಇಲ್ಲಿಯವರೆಗೆ ಬಿಡುಗಡೆಯಾಗಿಲ್ಲ. ಹಾಗಾಗಿ ಮಿಶ್ರಾ ಅವರು 16 ವರ್ಷದ ಮೊನಾಲಿಸಾ ಅವರ ವೃತ್ತಿಜೀವನವನ್ನು ಹಾಳು ಮಾಡಲು ಮುಂದಾಗಿದ್ದಾರೆ. ಇವರು ಉದ್ದೇಶಪೂರ್ವಕವಾಗಿಯೇ ನನ್ನ ಸಿನಿಮಾ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಮೊನಾಲಿಸಾ ಸಿನಿಮಾ ಮಾಡುವುದು ಅವರಿಗೆ ಇಷ್ಟ ಇಲ್ಲ.  ಹೀಗಾಗಿ ಯೂಟ್ಯೂಬ್ ಚಾನಲ್ ಮಾಲೀಕ ಸೇರಿದಂತೆ ಐವರು ಉದ್ದೇಶಪೂರ್ವಕವಾಗಿ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದು, ನನಗೆ ಘನತೆಗೆ ಕಳಂಕ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net