

ಬೆಂಗಳೂರು: 'ಮಠ', 'ಎದ್ದೇಳು ಮಂಜುನಾಥ' ಚಿತ್ರಗಳಿಂದಲೇ ಕನ್ನಡ ಚಿತ್ರರಂಗದಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದ ನಿರ್ದೇಶಕ ಗುರುಪ್ರಸಾದ್ (52), ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ (Guruprasad Suicide) ಶರಣಾಗಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಗುರುಪ್ರಸಾದ್ ಅವರ ಮೃತದೇಹವನ್ನು ಇಂದು ಜಿಲ್ಲೆಯ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ, ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಯಿತು. ಇದಾದ ನಂತರ ಗುರುಪ್ರಸಾದ್ ಎರಡನೇ ಪತ್ನಿ ಸುಮಿತ್ರಾ ಮತ್ತು ಅವರ ಸಹೋದರ ಬ್ರಾಹ್ಮಣ ಸಂಪ್ರದಾಯದಂತೆ ಗುರು ಅವರ ಅಂತಿಮ ವಿಧಿವಿಧಾನವನ್ನು ಈಡೇರಿಸಿದ್ದಾರೆ.
ವಿಲ್ಸನ್ ಗಾರ್ಡನ್ನಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ಗುರುಪ್ರಸಾದ್ ಅವರ ಅಂತ್ಯಕ್ರಿಯೆ ನೆರವೇರಿಸಲಾಗಿದ್ದು, ಕನ್ನಡ ಚಿತ್ರರಂಗದ ನಟ ಡಾಲಿ ಧನಂಜಯ, ದುನಿಯಾ ವಿಜಯ್, ನೀನಾಸಂ ಸತೀಶ್ ಸೇರಿದಂತೆ ಮುಂತಾದ ಕಲಾವಿದರು ನಿರ್ದೇಕನ ಅಂತ್ಯಕ್ರಿಯೆಯಲ್ಲಿ ಭಾಗಿಯಾದರು.