ಅಂಗವಿಕಲರಿಗೆ ನೇರ ಸಂದರ್ಶನ 22ರಂದು

je721538035802367-abc
Published on

ಹಾವೇರಿ: ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಕಾರ್ಯ ನಿರ್ವಹಿಸಲು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ "ಅಂಗವಿಕಲ ಅಭ್ಯಥಿರ್ಗಳಿಗೆ ನೇರ ಸಂದರ್ಶನ" ಏ. 22 ಬೆಳಗ್ಗೆ 10 ಗಂಟೆಗೆ ಇಲ್ಲಿಯ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜರುಗಲಿದೆ.

ಈ ಸಂದರ್ಶನದಲ್ಲಿ ಎಸ್​.ಎಸ್​.ಎಲ್​.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೆ ಪದವಿ ವಿದ್ಯಾರ್ಹತೆ ಹೊಂದಿದ ಪುರುಷ ಹಾಗೂ ಮಹಿಳಾ ಅಂಗವಿಕಲ ಉದ್ಯೋಗಾಕಾಂಕ್ಷಿಗಳು ಈ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಉದ್ಯೋಗಾಕಾಂಕ್ಷಿಗಳು ತಮ್ಮ ಬಯೋಡಾಟಾ ಮತ್ತು ಆಧಾರ್​ ಕಾರ್ಡ್​ ಝರಾಕ್ಸ್​ ಪ್ರತಿಯೊಂದಿಗೆ ನೇರ ಸಂದರ್ಶನದಂದು ಕಡ್ಡಾಯವಾಗಿ ನೋಂದಾಯಿಸಿಕೊಂಡು ಸಂದರ್ಶನಕ್ಕೆ ಹಾಜರಾಗಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net