

ಎನ್.ಆರ್.ಪುರ: ಸೊಳ್ಳೆ ನಿಯಂತ್ರಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವವಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎಲ್ದೋಸ್.ಟಿ.ವರ್ಗೀಸ್ ಹೇಳಿದರು.
ಜ್ವಾಲಾಮಾಲಿನಿ ಪ್ರೌಢಶಾಲೆ, ಆರೋಗ್ಯ, ಶಿಕ್ಷಣ ಇಲಾಖೆ, ತಾಲೂಕು ವಿಜ್ಞಾನ ಪರಿಷತ್, ರೋಟರಿ ಸಂಸ್ಥೆ ಆಶ್ರಯದಲ್ಲಿ ಏರ್ಪಡಿಸಿದ್ದ ಸೊಳ್ಳೆ ನಿಯಂತ್ರಣ ಮಾದರಿ ವಸ್ತು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂೆ, ಚಿಕನ್ ಗುನ್ಯಾ, ಮೆದುಳು ಜ್ವರ ರೋಗಗಳನ್ನು ಸೊಳ್ಳೆಗಳು ಒಬ್ಬರಿಂದ ಒಬ್ಬರಿಗೆ ಹರಡುವುದರಿಂದ ಸೊಳ್ಳೆಗಳ ನಿಯಂತ್ರಣ ಪ್ರಮುಖ ಎಂದರು.
ನೀರನ್ನು ಮುಚ್ಚಿಟ್ಟು ಬಳಸುವುದು, ನೀರು ನಿಲ್ಲದಂತೆ ಎಚ್ಚರಿಕೆ ಬಯಸುವುದು, ಘನ ತ್ಯಾಜ್ಯಗಳ ಸೂಕ್ತ ವಿಲೇವಾರಿ, ಲಾರ್ವ ಸಮೀಕ್ಷೆ ಮೂಲಕ ಸೊಳ್ಳೆಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬಹುದು. ಈ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಜತೆಗೆ ಎಲ್ಲ ಇಲಾಖೆ ಮತ್ತು ಸಾರ್ವಜನಿಕರು, ವಿದ್ಯಾರ್ಥಿಗಳು ಸಹಕರಿಸಬೇಕು ಎಂದರು.
ಶಿಕ್ಷಣ ಇಲಾಖೆ ಬಿಆರ್ಸಿ ಮಂಜುಳಾ ಮಾತನಾಡಿ, ತಾಲೂಕಿನಲ್ಲಿರುವ ಎಲ್ಲ ವಿಜ್ಞಾನ ಶಿಕ್ಷಕರಿಗೆ ಮಾದರಿ ತಯಾರಿಸುವ ಬಗ್ಗೆ ತರಬೇತಿ ನೀಡಲಾಗಿದೆ. ಈ ಶಿಕ್ಷಕರ ಮೇಲ್ವಿಚಾರಣೆಯಲ್ಲಿ ವಿದ್ಯಾರ್ಥಿಗಳು ಸೊಳ್ಳೆ ನಿಯಂತ್ರಣ ಮಾದರಿ ಅಥವಾ ಚಿತ್ರಕಲೆಗಳ ಮೂಲಕ ಪ್ರದರ್ಶಿಸಲಾಗುವುದು. ಎರಡು ವಿಭಾಗಗಳಲ್ಲಿ ಈ ಸ್ಪರ್ಧೆಯನ್ನು ನಡೆಸಿ ವಿಜೇತರಿಗೆ ನಗದು ಬಹುಮಾನ ನೀಡಲಾಗುವುದು ಎಂದರು.
ಮುಖ್ಯಶಿಕ್ಷಕ ಗಣಪತಿ ತಂತ್ರಿ, ರೋಟರಿ ಸಂಸ್ಥೆ ಅಧ್ಯಕ್ಷ ಕಿರಣ್, ರಾಜಕುಮಾರ್, ವಿಜಯಕುಮಾರ್, ತಾಲ್ಲೂಕು ಆರೋಗ್ಯ ಶಿಕ್ಷಣಾಕಾರಿ ಪಿ.ಪಿ.ಬೇಬಿ, ಆರೋಗ್ಯ ನಿರೀಕ್ಷಣಾಕಾರಿ ಭಗವಾನ್, ಆರೋಗ್ಯ ಇಲಾಖೆ ಸಿಬ್ಬಂದಿಯವರು ವಿದ್ಯಾರ್ಥಿಗಳು ಶಾಲಾ ಶಿಕ್ಷಕರು ಹಾಜರಿದ್ದರು.