

ಹಾವೇರಿ: ರೋಗಗಳ ತಡೆಗಟ್ಟಲು ಮುಂಜಾಗ್ರತಾ ಕ್ರಮಗಳ ಕುರಿತು ಅರಿವು ಮೂಡಿಸುವಲ್ಲಿ ವಸತಿ ನಿಲಯಗಳ ಪಾಲಕರ ಮತ್ತು ಸಿಬ್ಬಂದಿ ಪಾತ್ರ ಮುಖ್ಯವಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ವಸತಿ ನಿಲಯದ ಪಾಲಕರಿಗೆ ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸುವ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಾಗಾರದಲ್ಲಿ ವೈಯಕ್ತಿಕ ಶುಚಿತ್ವ ಬಗ್ಗೆ ಆರೋಗ್ಯ ಶಿಕ್ಷಣ, ವರ್ಷದಲ್ಲಿ 2 ಬಾರಿ ಜಂತು ಹುಳು ಮಾತ್ರೆ ನೀಡಿಕೆ, ಆಯುಷ್ಮಾನ್, ಆರೋಗ್ಯ ಕರ್ನಾಟಕ ಯೋಜನೆ, ಜೆ.ಇ. ಲಸಿಕೆ, ಅನೀಮಿಯಾ ಮುಕ್ತ ಭಾರತ ಮಾಡಲು ಪೌಷ್ಟಿಕ ಆಹಾರ ಸೇವನೆ ಹಾಗೂ ಸಾಂಕ್ರಾಮಿಕ ರೋಗಗಳ ಮುಂಜಾಗೃತೆ ಬಗ್ಗೆ ಆರೋಗ್ಯ ಶಿಕ್ಷಣ ನೀಡಲಾಯಿತು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಚನ್ನಪ್ಪ ಲಮಾಣಿ, ಮೇಲ್ವಿಚಾರಕ ಕೆ.ಎಸ್. ಕುಂದಗೋಳ, ಆರೋಗ್ಯ ಶಿಕ್ಷಣಾಧಿಕಾರಿ ಕೆ.ಎಸ್. ಕನ್ನಮ್ಮನವರ ಮತ್ತಿತರರು ಉಪಸ್ಥಿತರಿದ್ದರು.