ಮಣಿಪುರ ಸರ್ಕಾರವನ್ನು ವಜಾ ಮಾಡಿ

manipura
ಮಣಿಪುರ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಚಿಕ್ಕಮಗಳೂರಿನಲ್ಲಿ ದಲಿತ ಸಂಘರ್ಷ ಸಮಿತಿ ಸದಸ್ಯರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಎಲ್.ಎಸ್.ಶ್ರೀಕಾಂತ್, ರಾಮು, ಲತಾ, ಹನುಮಂತ, ಗಂಗಯ್ಯ ಇತರರಿದ್ದರು.
Published on

ಚಿಕ್ಕಮಗಳೂರು: ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ಸರ್ಕಾರವನ್ನು ವಜಾಗೊಳಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಸದಸ್ಯರು ಡಿಸಿ ಕಚೇರಿ ಶಿರಸ್ತೇದಾರ್ ಹೇಮಂತ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಮಣಿಪುರದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಮಹಿಳೆಯರಿಗೆ ಯಾವ ಮಟ್ಟದ ಅವಮಾನ ಮಾಡುವುದಕ್ಕೂ ಹೇಸದ ಮನಸ್ಥಿತಿ, ಪೊಲೀಸರು ಮತ್ತು ಅಧಿಕಾರದಲ್ಲಿರುವವರ ಅಸಡ್ಡೆ, ಹಿಂಸೆಗೆ ನೀಡಿದ ಕುಮ್ಮಕ್ಕು, ಮಧ್ಯಪ್ರವೇಶ ಮಾಡಲು ಕೇಂದ್ರ ಸರ್ಕಾರ ಹಿಂದೇಟು ಹಾಕಿ ಮಾನವೀಯತೆಯನ್ನೇ ಮರೆತಿರುವುದು ಈ ಪ್ರಕರಣದಲ್ಲಿ ಬಿಂಬಿತವಾಗಿದೆ ಎಂದು ಸಮಿತಿ ಜಿಲ್ಲಾ ಸಂಚಾಲಕ ಎಲ್.ಎಸ್.ಶ್ರೀಕಾಂತ್ ದೂರಿದರು.
ಬೆತ್ತಲೆಗೊಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವವರೆಗೆ ಯಾವುದೇ ತನಿಖೆ ನಡೆದಿಲ್ಲ. ಆರೋಪಿಗಳನ್ನು ಬಂಧಿಸಿರಲಿಲ್ಲ. ಇದನ್ನು ಸೂಕ್ಷ್ಮವಾಗಿ ಗಮನಿಸಿದಾಗ ರಾಜ್ಯ ಮತ್ತು ಕೇಂದ್ರ ಸರ್ಕಾರ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡದ ಮಣಿಪುರ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಡಿಎಸ್‌ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಎನ್.ಆರ್.ಪುರ ರಾಮು, ಮಹಿಳಾ ಸಂಚಾಲಕಿ ಲತಾ, ತಾಲೂಕು ಸಂಘಟನಾ ಸಂಚಾಲಕ ಹನುಮಂತ, ಬಾಳೆಹೊನ್ನೂರು ಸಂಚಾಲಕ ಗಂಗಯ್ಯ, ಕಡೂರು ಸಂಚಾಲಕ ಪ್ರಮೋದ್, ತರೀಕೆರೆ ಸಂಚಾಲಕ ಅಣ್ಣಯ್ಯ, ಮುಖಂಡರಾದ ಗಂಗಯ್ಯ, ಜಾರ್ಜ್, ದೇವರಾಜ್, ವೆಂಕಟೇಶ್, ರುದ್ರಮ್ಮ, ನಾಗರಾಜ್ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net