ಆದಾಯ ಮೀರಿ ಗಳಿಗೆ ವಿಚಾರಣಾ ಅರ್ಜಿ ವಜಾ

highcourt
Published on

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ವಿಚಾರವಾಗಿ ಜನಪ್ರತಿನಿಧಿಗಳ ಆಸ್ತಿ ಮತ್ತು ಆದಾಯ ಮೂಲಗಳ ಕುರಿತು ಲೋಕಾಯುಕ್ತ ಸಂಸ್ಥೆಯಿಂದ ವಿಚಾರಣೆ ನಡೆಸುವುದಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಕೆಯಾದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರು ಹಾಗೂ ಸಂಸದರ ಆಸ್ತಿ ಮತ್ತದರ ಮೂಲಗಳ ಕುರಿತು ತನಿಖೆಗೆ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ. ಐ.ಅರುಣ್ ಅವರ ಪೀಠ, ಸರ್ಕಾರಿ ನೌಕರರು ಹಾಗೂ ಜನಪ್ರತಿನಿಧಿಗಳ ಆಸ್ತಿಯ ಪ್ರಮಾಣ ಹೆಚ್ಚಾದಲ್ಲಿ ಅಂತಹವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಕಾನೂನಿನಡಿ ಅವಕಾಶವಿದೆ.

ಅರ್ಜಿಯಲ್ಲಿನ ಮನವಿಗಳನ್ನು ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಪರಿಗಣಿಸಲು ಆಗದು ಎಂದು ಹೇಳಿ ಅರ್ಜಿ ವಜಾಗೊಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net