ಹಿಂದು ಮಹಾಸಭಾ ಗಣಪತಿ ವಿಸರ್ಜನೆ; ಸಿಸಿ ಕ್ಯಾಮರಾ, ಡ್ರೋನ್ ಹದ್ದಿನ ಕಣ್ಣು

gandibazar entrence priparation
ಗಾಂಧಿಬಜಾರ್ ಮುಖ್ಯದ್ವಾರದಲ್ಲಿ ತಲೆಯೆತ್ತಿರುವ ಉಗ್ರ ನರಸಿಂಹ ಅವತಾರದ ಕಲಾಕೃತಿ.
Published on

ಶಿವಮೊಗ್ಗ: ನಗರದ ಪ್ರತಿಷ್ಠಿತ ಹಿಂದು ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಗೆ ಮಲೆನಾಡು ಶಿವಮೊಗ್ಗ ಸಂಪೂರ್ಣ ಸಜ್ಜಾಗಿದೆ. ಸೆ.28ರಂದು ಬೆಳಗ್ಗೆ ಕೋಟೆ ರಸ್ತೆಯ ಶ್ರೀ ಭೀಮೇಶ್ವರ ದೇವಸ್ಥಾನದಿಂದ ಅದ್ದೂರಿ ಮೆರವಣಿಗೆ ಆರಂಭವಾಗಲಿದೆ. ಇದಕ್ಕಾಗಿ ಗಾಂಧಿ ಬಜಾರ್, ಅಮೀರ್ ಅಹಮ್ಮದ್ ವೃತ್ತ ಸೇರಿ ಇಡೀ ಶಿವಮೊಗ್ಗ ನಗರ ಕೇಸರಿಮಯವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ಹಿಂದು ಸಂಘಟನಾ ಮಹಾಮಂಡಳಿಯ 79ನೇ ವರ್ಷದ ಗಣೇಶೋತ್ಸವದ ಗಣಪತಿ ವಿಸರ್ಜನಾ ಮೆರವಣಿಗೆ ಹಿನ್ನೆಲೆಯಲ್ಲಿ ನಗರಾದ್ಯಂತ ಭರ್ಜರಿ ಸಿದ್ಧತೆ ಕೈಗೊಳ್ಳಲಾಗಿದೆ. ಶ್ರೀ ಮಾರಿಕಾಂಬಾ ದೇವಸ್ಥಾನದ ಬಳಿ ಗಣೇಶೋತ್ಸವದ ಮಹಾಮಂಗಳಾರತಿ ನಡೆಯಲಿದ್ದು ಬಳಿಕ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವವು ಆರಂಭಗೊಳ್ಳಲಿದೆ. ಮೆರವಣಿಗೆ ಸಾಗುವ ಮಾರ್ಗಗಳನ್ನು ಕೇಸರಿ ಬಂಟಿಂಗ್ಸ್‌ಗಳಿಂದ ಸಿಂಗರಿಸಲಾಗಿದೆ.
ವಿಶೇಷವಾಗಿ ಗಾಂಧಿಬಜಾರ್, ಶಿವಪ್ಪನಾಯಕ ವೃತ್ತ, ಅಮೀರ್ ಅಹ್ಮದ್ ವೃತ್ತ, ಬಿ.ಎಚ್.ರಸ್ತೆ, ಅಶೋಕ ವೃತ್ತ, ನೆಹರು ರಸ್ತೆ, ಸಿದ್ದಪ್ಪ ವೃತ್ತ, ದುರ್ಗಿಗುಡಿ, ಮಹಾವೀರ ವೃತ್ತ, ಬಾಲರಾಜ ಅರಸು ರಸ್ತೆ, ಎಸ್‌ಪಿಎಂ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್ ಸೇರಿ ಪ್ರಮುಖ ವೃತ್ತ ಮತ್ತು ರಸ್ತೆಗಳಲ್ಲಿ ಕೇಸರಿ ಫ್ಲೆಕ್ಸ್, ಬಂಟಿಂಗ್ಸ್ ರಾರಾಜಿಸುತ್ತಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net