

ಬೈಲಕುಪ್ಪೆ: ಆದಿವಾಸಿ ಬುಡಕಟ್ಟು ಜನರಿಗಾಗಿ ಡೀಡ್ ಸಂಸ್ಥೆ, ಬುಡಕಟ್ಟು ಕೃಷಿಕರ ಸಂಘ, ಸದೃಢ ಚಾರಿಟಬಲ್ ಟ್ರಸ್ಟ್, ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ಜಿಲ್ಲಾ ಜೇನು ಕುರುಬರ ಅಭಿವೃದ್ಧಿ ಸಂಘದ ಸಹಯೋಗದಲ್ಲಿ ಆದಿವಾಸಿಗಳಿಗೆ ಕನ್ನಡಕಗಳನ್ನು ಉಚಿತವಾಗಿ ವಿತರಿಸಲಾಯಿತು.
ಪಿರಿಯಾಪಟ್ಟಣ ತಾಲೂಕಿನ ರಾಣಿಗೇಟ್ ಆಶ್ರಮ ಶಾಲೆ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹುಣಸೂರಿನ ಡೀಡ್ ಸಂಸ್ಥೆಯ ಮುಖ್ಯಸ್ಥ ಡಾ.ಎಸ್.ಶ್ರೀಕಾಂತ್ ಕನ್ನಡಕಗಳನ್ನು ವಿತರಣೆ ಮಾಡಿ ಮಾತನಾಡಿದರು.
ಕೆಲವು ದಿನಗಳ ಹಿಂದೆ ರಾಣಿಗೇಟ್ ಸುತ್ತಮುತ್ತ ಆದಿವಾಸಿ ಬುಡಕಟ್ಟು ಜನರಿಗಾಗಿ ಆಶ್ರಮ ಶಾಲೆ ಆವರಣದಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು. ಕಣ್ಣಿನ ಸಮಸ್ಯೆ ಇದ್ದವರಿಗೆ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಿ ಅವರಿಗೆ ಇಂದು ಕನ್ನಡಕಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಬುಡಕಟ್ಟು ಸಂಘದ ಅಧ್ಯಕ್ಷ ವೆಂಕಟಸ್ವಾಮಿ, ಜಯಪ್ಪ, ರಾಮು, ಕೊಪ್ಪ ಗ್ರಾಮ ಪಂಚಾಯಿತಿ ಸದಸ್ಯರಾದ ಸಂಶುದ್ದೀನ್, ಗೀತಾ, ಪೂರ್ಣಿಮಾ, ರಾಣಿ ಗೇಟ್ ಆಶ್ರಮ ಶಾಲೆಯ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕಿ ಯಶೋದಾ, ಶಿಕ್ಷಕರು, ಗ್ರಾಮಸ್ಥರು ಹಾಜರಿದ್ದರು.