

ಕೆ.ಆರ್.ನಗರ: ಪಟ್ಟಣದ ಕೆನರಾ ಬ್ಯಾಂಕ್ ವತಿಯಿಂದ 2018-19ನೇ ಸಾಲಿನ 5ರಿಂದ 10ನೇ ತರಗತಿಯವರೆಗೆ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿನಿಯರಿಗೆ ಖಾತೆ ತೆರೆದು ಶೈಕ್ಷಣಿಕ ಪ್ರೋತ್ಸಾಹಧನ ವಿತರಿಸಲಾಯಿತು.
ಪಟ್ಟಣದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಸೋಮವಾರ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಮಧುವನಹಳ್ಳಿ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂವರು ವಿದ್ಯಾರ್ಥಿನಿಯರಿಗೆ ತಲಾ 2500 ಮತ್ತು ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಮೂವರು ವಿದ್ಯಾರ್ಥಿನಿಯರಿಗೆ ತಲಾ 5000 ರೂ.ಗಳಂತೆ ಪ್ರೋತ್ಸಾಹ ಧನ ನೀಡಲಾಯಿತು.
ನಂತರ ಮಾತನಾಡಿದ ಬ್ಯಾಂಕ್ ವ್ಯವಸ್ಥಾಪಕಿ ಕೆ.ಎಸ್.ಮಾಲತಿ, ಬಡ ಕುಟುಂಬದಿಂದ ಬರುವ ಹಾಗೂ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರಿಗೆ ನೆರವು ನೀಡಬೇಕು ಎಂಬ ಉದ್ದೇಶದಿಂದ ಪ್ರೋತ್ಸಾಹ ಧನ ನೀಡಲಾಗಿದೆ. ಇದು ಅವರ ಶಿಕ್ಷಣಕ್ಕೆ ಅನುಕೂಲವಾಗುವುದರ ಜತೆಗೆ ಇತರ ವಿದ್ಯಾರ್ಥಿಗಳಿಗೆ ಉತ್ತಮ ಅಂಕ ಗಳಿಸಲು ನೆರವಾಗಬೇಕು ಎಂದರು.
ಬ್ಯಾಂಕ್ ಸಿಬ್ಬಂದಿ ರಾಮಣ್ಣ, ರಮೇಶ್, ರಾಮಚಂದ್ರ, ಅನಿಲ್, ಸ್ಮಿತಾ, ಪೂಜಾ, ಭಾವನಾ, ಶಿಕ್ಷಕರಾದ ರಾಧಾ, ಮಂಜು ಮತ್ತಿತರರಿದ್ದರು.