ಶಿವಮೊಗ್ಗದಲ್ಲಿ ಫೆ.25ಕ್ಕೆ ಆಶ್ರಯ ಮನೆಗಳ ಹಂಚಿಕೆ

balkieshbanu
Published on

ಶಿವಮೊಗ್ಗ: ವಸತಿ ಸಚಿವ ಜಮೀರ್ ಅಹಮದ್ ಫೆ.25ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದು ಅಂದು ಬೆಳಗ್ಗೆ 11ಕ್ಕೆ ಗೋವಿಂದಾಪುರದಲ್ಲಿ ಎರಡನೇ ಹಂತದ 625 ಆಶ್ರಯ ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಭಾನು ತಿಳಿಸಿದರು.

ಎಲ್ಲರ ಸಮ್ಮುಖದಲ್ಲಿ ಲಾಟರಿ ಮೂಲಕ ಮನೆ ಹಸ್ತಾಂತರ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಶಾರದಾ ಪೂರ‌್ಯಾನಾಯ್ಕಾ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್ ಮಾತನಾಡಿ, ಆಶ್ರಯ ಮನೆಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಶೀಘ್ರ ಒದಗಿಸಲಾಗುವುದು. ಈಗಾಗಲೇ 600 ಮನೆಗಳ ಹಂಚಿಕೆಯಾಗಿದೆ. ಈಗ ಇನ್ನೂ 625 ಮನೆಗಳ ಹಸ್ತಾಂತರ ನಡೆಯಲಿದೆ ಎಂದು ತಿಳಿಸಿದರು. ಪಾಲಿಕೆ ಮಾಜಿ ಸದಸ್ಯ ಎಚ್.ಸಿ.ಯೋಗೇಶ್, ಪ್ರಮುಖರಾದ ಕಲೀಂ ಪಾಷಾ, ಶಿವಕುಮಾರ್, ಲಕ್ಷ್ಮಣ್ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net