

ಹನಗೋಡು: ಹನಗೋಡು ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಬಿತ್ತನೆಗೆ ಅಗತ್ಯ ಬಿತ್ತನೆ ಬೀಜವನ್ನು ರಿಯಾಯಿತಿ ದರದಲ್ಲಿ ವಿತರಿಸುತ್ತಿದ್ದು, ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೃಷಿ ಅಧಿಕಾರಿ ವಿನಯ್‌ಕುಮಾರ್ ತಿಳಿಸಿದರು.
ಹನಗೋಡು ಕೃಷಿ ರೈತ ಸಂಪರ್ಕ ಕೇಂದ್ರದಲ್ಲಿ ಗುರುವಾರ ರೈತರಿಗೆ ಬಿತ್ತನೆ ಬೀಜ ವಿತರಿಸಿ ಮಾತನಾಡಿ, ರೈತ ಸಂಪರ್ಕ ಕೇಂದ್ರಗಳಲ್ಲಿ ಮೆಕ್ಕೆಜೋಳ, ಹಲಸಂದೆ, ರಾಗಿ ಕೃಷಿ ಉಪಕರಣಗಳಾದ ನೇಗಿಲು, ಕುಂಟೆ, ಕೀಟನಾಶಕಗಳು ಲಭ್ಯವಿದ್ದು, ರೈತರು ಅಗತ್ಯ ದಾಖಲೆಗಳನ್ನು ರೈತ ಸಂಪರ್ಕ ಕೇಂದ್ರಕ್ಕೆ ನೀಡಿ, ಬಾರ್ ಕೋಡ್ ಸ್ಕಾೃನರ್ ಮೂಲಕ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಪಡೆಯಬಹುದು. ಹನಗೋಡು ಸೇರಿದಂತೆ ಹುಣಸೂರು ತಾಲೂಕಿನ ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿಯೂ ಬಿತ್ತನೆ ಬೀಜಗಳು ಕೊರತೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಇಲಾಖೆ ಕೈಗೊಂಡಿದ್ದು, ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಈ ವೇಳೆ ಇಲಾಖೆ ಸಿಬ್ಬಂದಿ ಶಶಿಕುಮಾರ್, ಕುಮಾರ್, ಕೃಷಿ ಸಖಿಯರಾದ ನಂಜಮಣಿ, ಶೈಲಜಾ, ರೋಜಾ ಮತ್ತಿತರರಿದ್ದರು.