ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ ಜರುಗಿಸಿ

ckm congres manavi
ಚಿಕ್ಕಮಗಳೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಘಟಕದ ಮುಖಂಡರು ಇನ್ಸ್‌ಪೆಕ್ಟರ್ ಗವಿರಾಜ್‌ಗೆ ಮನವಿ ಸಲ್ಲಿಸಿದರು. ಸೋಮಶೇಖರ್, ಮುಖಂಡರಾದ ಎಂ.ಎಲ್.ಎ.ಮಂಜು, ನವೀನ್ ಎತ್ತಿನಮನೆ ಇತರರಿದ್ದರು.
Published on

ಚಿಕ್ಕಮಗಳೂರು: ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಘಟಕದ ಮುಖಂಡರು ಇನ್ಸ್‌ಪೆಕ್ಟರ್ ಗವಿರಾಜ್‌ಗೆ ಬುಧವಾರ ಮನವಿ ಸಲ್ಲಿಸಿದರು.
ಘಟಕದ ಉಪಾಧ್ಯಕ್ಷ ಸಚಿನ್ ಎತ್ತಿನಮನೆ ಮಾತನಾಡಿ, ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ವ್ಯಕ್ತಿಯೊಬ್ಬರು ಮುಖ್ಯಮಂತ್ರಿಗಳ ವಿರುದ್ಧ ಅಪಪ್ರಚಾರ ನಡೆಸುವ ದುರುದ್ದೇಶದಿಂದ ಹಿಂದುಗಳ ಅಗತ್ಯ ನಮಗೆ ಬೇಡ, ಮುಸ್ಲಿಂ ವೋಟು ನಮಗೆ ಬೇಕು ಎಂಬ ಶೀರ್ಷಿಕೆಯಲ್ಲಿ ಬರೆದು ದಿನಪತ್ರಿಕೆಯಲ್ಲಿ ಪ್ರಕಟವಾದಂತೆ ಜನತೆಯ ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯದ ಸರ್ವ ಜನತೆಗೂ ಸಾಮಾಜಿಕ ನ್ಯಾಯ, ಅನುದಾನ ಹಾಗೂ ಬೇಡಿಕೆಗಳನ್ನು ಈಡೇರಿಸುವಲ್ಲಿ ಸತತವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿ ವಿರುದ್ಧ ಇಲ್ಲಸಲ್ಲದ ಅಪಪ್ರಚಾರ ಮಾಡುವ ಕಿಡಿಕೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಕಾಂಗ್ರೆಸ್ ಒಬಿಸಿ ಪ್ರಧಾನ ಕಾರ್ಯದರ್ಶಿ ಸೋಮಶೇಖರ್, ಮುಖಂಡರಾದ ಎಂ.ಎಲ್.ಎ.ಮಂಜು, ನವೀನ್ ಎತ್ತಿನಮನೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net