ರಾಷ್ಟ್ರೀಯ ಲೋಕ ಅದಾಲತ್; ಜಿಲ್ಲೆಯಲ್ಲಿ 29,073 ಪ್ರಕರಣಗಳ ಇತ್ಯರ್ಥ

High court logo
Published on

ಹಾವೇರಿ: ಜಿಲ್ಲೆಯ ನ್ಯಾಯಾಲಯಗಳಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಇತ್ಯರ್ಥಕ್ಕೆ ಬಾಕಿಯಿದ್ದ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ 29,073 ಪ್ರಕರಣಗಳು ಇತ್ಯರ್ಥಗೊಂಡಿವೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೇ ಯಾದವ ವನಮಾಲಾ ಆನಂದರಾವ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇತ್ಯರ್ಥಕ್ಕೆ ಗುರುತಿಸಲ್ಪಟ್ಟ 43,435 ಪ್ರಕರಣಗಳಲ್ಲಿ 29,073 ಪ್ರಕರಣಗಳು ಇತ್ಯರ್ಥಗೊಂಡಿದ್ದು, 33.25 ಕೋಟಿ ರೂ. ಮೊತ್ತದ ರಾಜೀಯಾಗಿದೆ. ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕೆ ಗುರುತಿಸಲಾದ 4687 ಪ್ರಕರಣಗಳ ಪೈಕಿ 3449 ಪ್ರಕರಣಗಳು ಇತ್ಯರ್ಥಗೊಂಡಿದ್ದು, 17.37 ಕೋಟಿ ರೂ. ಮೊತ್ತದ ರಾಜೀಯಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ಇತ್ಯರ್ಥಕ್ಕೆ ಗುರುತಿಸಲಾದ 38,748 ಪ್ರಕರಣಗಳಲ್ಲಿ 25,624 ಪ್ರಕರಣಗಳು ಇತ್ಯರ್ಥಗೊಂಡಿದ್ದು, 15.88 ಕೋಟಿ ರೂ. ಮೊತ್ತದ ರಾಜೀಯಾಗಿದೆ.
ಜಿಲ್ಲಾ ಹಾಗೂ ತಾಲೂಕು ವಕೀಲರ ಸಂಘ, ಜಿಲ್ಲೆಯ ಎಲ್ಲ ನ್ಯಾಯಾಧೀಶರು, ಅಭಿಯೋಜನೆ ಇಲಾಖೆ, ಆರಕ್ಷಕ ಇಲಾಖೆಯವರು ಹಾಗೂ ಕಕ್ಷಿಗಾರರ ಸಹಕಾರದೊಂದಿಗೆ ರಾಷ್ಟ್ರೀಯ ಲೋಕ ಅದಾಲತ್ ಯಶಸ್ವಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net