ಮಕ್ಕಳ ಸಾಹಿತ್ಯ ಸಮ್ಮೇಳನ

SAGAR SAMELANA
12ನೇ ಮಕ್ಕಳ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷತೆ ಕೆ.ಪಿ.ಮಾನ್ವಿ ಕರೂರು.
Published on

ಸಾಗರ: ಜಿಲ್ಲಾ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ಸಿಗಂದೂರೇಶ್ವರಿ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ತಾಲೂಕು ಮಟ್ಟದ 12ನೇ ಮಕ್ಕಳ ಸಾಹಿತ್ಯ ಸಮ್ಮೇಳನ ಜ.3ರ ಬೆಳಗ್ಗೆ 10ರಿಂದ ಉಳ್ಳೂರಿನ ಸಿಗಂದೂರೇಶ್ವರಿ ಶಿಕ್ಷಣ ಸಂಸ್ಥೆಯಲ್ಲಿ ಕೆ.ಪಿ.ಮಾನ್ವಿ ಕರೂರು ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ. ಬೆಳಗ್ಗೆ 10ಕ್ಕೆ ಮಾನ್ಯ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ದಿಕ್ಸೂಚಿ ಭಾಷಣ ಮಾಡಲಿದ್ದು, ಕಸ್ತೂರಿ ಸಾಗರ್ ಆಶಯದ ಮಾತುಗಳನ್ನು ಆಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ. ನಾ.ಡಿಸೋಜ, ಲೀಲಾವತಿ, ತಿರುಮಲೇಶ್, ಪ್ರಭಾಕರ್, ಈ.ಪರಶುರಾಮಪ್ಪ, ಡಾ. ಅನ್ನಪೂರ್ಣ, ಕೃಷ್ಣಮೂರ್ತಿ ಬಿಳಿಗಲ್ಲೂರು, ನಿಕಟಪೂರ್ವ ಅಧ್ಯಕ್ಷೆ ರಕ್ಷಿತಾ ಪಿ.ಕೆಲವೆ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11.30ರಿಂದ ವಿವಿಧ ಗೋಷ್ಠಿಗಳು ನಡೆಯಲಿವೆ. ಸಾಹಿತಿ ವಿ.ಗಣೇಶ್ ಸಮಾರೋಪ ಮಾತುಗಳನ್ನಾಡಲಿದ್ದಾರೆ. ಜೆ.ಜಿ.ವಿದ್ಯಾರೇಖಾ ಅಧ್ಯಕ್ಷತೆ ವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net