ಫೆ.6ರಿಂದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

invatation
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಡಿ.ಮಂಜುನಾಥ್ ಬಿಡುಗಡೆ ಮಾಡಿದರು. ಬಿ.ಚಂದ್ರೇಗೌಡ, ವಿ.ಟಿ.ಸ್ವಾಮಿ, ಕೆ.ಎಸ್.ಹುಚ್ರಾಯಪ್ಪ, ಮಹಾದೇವಿ ಮುಂತಾದವರಿದ್ದರು.
Published on

ಶಿವಮೊಗ್ಗ: ಜಿಲ್ಲಾ ಮಟ್ಟದ 19ನೇ ಕನ್ನಡ ಸಾಹಿತ್ಯ ಸಮ್ಮೇಳನ ಫೆ.6 ಹಾಗೂ 7ರಂದು ಗೋಪಶೆಟ್ಟಿಕೊಪ್ಪದ ಸಾಹಿತ್ಯ ಗ್ರಾಮದಲ್ಲಿ ನಡೆಯಲಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಡಿ.ಮಂಜುನಾಥ ಹೇಳಿದರು.

ಸಾಹಿತ್ಯ ಗ್ರಾಮದಲ್ಲಿ ಏರ್ಪಡಿಸಿದ್ದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿ, ಪರಿಷತ್ ಸದಸ್ಯರು, ಸಾಹಿತ್ಯ ಹಾಗೂ ಸಾಂಸ್ಕೃತಿಕ ಸಂಗತಿಗಳಲ್ಲಿ ಆಸಕ್ತಿಯಿರುವ ವ್ಯಕ್ತಿಗಳನ್ನು ನಮ್ಮ ಪದಾಧಿಕಾರಿಗಳು ಖುದ್ದು ಭೇಟಿ ಮಾಡಿ ಆಮಂತ್ರಣ ಪತ್ರಿಕೆ ತಲುಪಿಸಬೇಕು ಎಂದು ತಿಳಿಸಿದರು.

ಸಮ್ಮೇಳನ ವ್ಯವಸ್ಥೆಗೆ ವಿವಿಧ ಉಪ ಸಮಿತಿಗಳನ್ನು ರಚಿಸಲಾಯಿತು. ಕಾರ್ಯಕ್ರಮ ನಿರ್ವಹಣೆ, ಸಮಯ ಪಾಲನೆ ವಿಷಯ ಕುರಿತು ಚರ್ಚಿಸಲಾಯಿತು. ಜಿಲ್ಲೆಯ ವಿವಿಧ ಘಟಕಗಳ ಪದಾಧಿಕಾರಿಗಳಾದ ರಮೇಶ್ ಶೆಟ್ಟಿ, ವಿ.ಟಿ.ಸ್ವಾಮಿ, ಮಹಾದೇವಿ, ಕೆ.ಎಸ್.ಹುಚ್ರಾಯಪ್ಪ, ರಘು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net