

ಬೆಂಗಳೂರು:
ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿ ಮತ್ತು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಘಟನೆಯನ್ನು ಖಂಡಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಜ.29ರಂದು ಬೆಳಿಗ್ಗೆ ಬಿಜೆಪಿ ಪ್ರತಿಭಟನೆ ನಡೆಸಲಿದೆ.
ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸೂಚನೆ ಮೇರೆಗೆ ಈ ಪ್ರತಿಭಟನೆ ನಡೆಯಲಿದ್ದು, ಜಿಲ್ಲಾ ಮಟ್ಟದ ಎಲ್ಲಾ ನಾಯಕರು ಮತ್ತು ನೂತನ ಪದಾಧಿಕಾರಿಗಳು ಭಾಗವಹಿಸಬೇಕು ಎಂದು ಸೂಚನೆ ರವಾನಿಸಲಾಗಿದೆ.
ಮಂಡ್ಯ ಜಿಲ್ಲೆ ಕೆರಗೋಡಿನಲ್ಲಿ ಹನುಮದ್ವಜವನ್ನು ಕೆಳಕ್ಕಿಳಿಸಿ ಹರಿದಿರುವುದಲ್ಲದೆ, ರಾಷ್ಟ್ರಧ್ವಜವನ್ನು ಮದ್ಯಾಹ್ನ ಹಾರಿಸುವ ಮೂಲಕ ಅವಮಾನ ಮಾಡಿರುವುದನ್ನು ಖಂಡಿಸಿಯೂ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.