

ಹಾವೇರಿ: ನೆಹರು ಯುವ ಕೇಂದ್ರದಲ್ಲಿ ಮಿಷನ್ ಲೈಫ್ ಎಂಬ ವಿಷಯ ಕುರಿತು ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಜ. 10ರಂದು ಬೆಳಗ್ಗೆ 10 ಗಂಟೆಗೆ ನಗರದ ನೆಹರು ಯುವ ಕೇಂದ್ರದ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಅಭ್ಯರ್ಥಿಗಳು 15 ರಿಂದ 29 ವರ್ಷದೊಳಗಿರಬೇಕು. ಪ್ರಥಮ ಸ್ಥಾನಕ್ಕೆ 4 ಸಾವಿರ ರೂ., ದ್ವಿತೀಯ ಸ್ಥಾನಕ್ಕೆ 2 ಸಾವಿರ ರೂ. ಹಾಗೂ ತೃತೀಯ ಸ್ಥಾನಕ್ಕೆ 1 ಸಾವಿರ ರೂ. ಬಹುಮಾನ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಜ. 9ರಂದು ಸಂಜೆ 5 ಗಂಟೆಯೊಳಗಾಗಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.