

ಹಾವೇರಿ: ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದ ಉಪಚುನಾಚಣೆ ಹಿನ್ನಲೆಯಲ್ಲಿ ಜಿಲ್ಲಾ ಮಾದರಿ ನೀತಿ ಸಂಹಿತೆ ಸಮಿತಿ ರಚಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ (9448484413) ಅಧ್ಯಕ್ಷರಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶು ಕುಮಾರ್(9480804501), ಆದಾಯ ತೆರಿಗೆ ಇಲಾಖೆ ಅಧಿಕಾರಿ ಫಯಾಜ್ ಕತೀಬ(8762301199), ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಶಿವಕುಮಾರ ಎಂ.ಎಸ್(9448759320), ಅಬಕಾರಿ ಇಲಾಖೆ ಉಪ ಆಯುಕ್ತೆ ಟಿ.ವಿ. ಶೈಲಜಾ (9449597059) ಸದಸ್ಯರಾಗಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ (9480868000) ಅವರು ಎಂ.ಸಿ.ಸಿ. ನೋಡಲ್ ಅಧಿಕಾರಿಗಳಾಗಿದ್ದಾರೆ.