ಇಂಗಳಗಿ ಪ್ರಕರಣದಲ್ಲಿ ನಾಲ್ವರ ಬಂಧನ

images
Published on

ವಿಜಯವಾಣಿ ಸುದ್ದಿಜಾಲ ಬೆಳಗಾವಿ

ಹುಕ್ಕೇರಿ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಶ್ರೀರಾಮ ಸೇನೆ ಐದು ಜನ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಹಾಕಿ ಹೊಡೆದಿರುವ ಪ್ರಕರಣಕ್ಕೆ ಸಂಬಂಧಿಸಿದ ನಾಲ್ವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ತಿಳಿಸಿದರು.

ನಗರದ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆದ ಬಳಿಕ ನಮ್ಮ ಗಮನಕ್ಕೆ ಬಂದಿದೆ. ತಕ್ಷಣವೇ ಯಮಕನಮರಡಿ ಠಾಣೆ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡು ನಾಲ್ವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ ಎಂದರು.

ಘಟನೆ ವಿವರ: ಜೂ.26ರಂದು ಐದು ಹಸುಗಳು ಸಾಗಿಸುತ್ತಿದ್ದ ವಾಹನ ತಡೆದು ಶ್ರೀರಾಮ ಸೇನೆ ಕಾರ್ಯಕರ್ತರು ಪರಿಶೀಲನೆ ನಡೆಸಿ ಯಮಕನಮರಡಿ ಪೊಲೀಸ್ ಠಾಣೆ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ದನದ ಜಾತ್ರೆಯಲ್ಲಿ ಖರೀದಿ ಮಾಡಿರುವ ಹಸುಗಳನ್ನು ಸಾಕಾಣಿಕೆ ತೆಗೆದುಕೊಂಡು ಹೋಗುತ್ತಿದ್ದೇವೆ ಎಂದು ವಾಹನ ಚಾಲಕ ದಾಖಲೆ ಸಲ್ಲಿಸಿದ್ದನು. ಈ ಹಿನ್ನೆಲೆ ಶ್ರೀರಾಮ ಸೇನೆ ಕಾರ್ಯಕರ್ತರು ಅನುಮಾನ ವ್ಯಕ್ತವಾದ ಹಿನ್ನೆಲೆ ಪರಿಶೀಲನೆ ನಡೆಸಿದ್ದೇವೆ. ಈ ಬಗ್ಗೆ ದೂರು ಇರುವುದಿಲ್ಲ ಎಂದು ಲಿಖಿತ ರೂಪದಲ್ಲಿ ಬರೆದುಕೊಟ್ಟಿದ್ದಾರೆ.

ಎರಡು ದಿನದ ಬಳಿಕ ಹಸುಗಳನ್ನು ಖರೀದಿ ಮಾಡಿದ್ದ ಬಾಬುಸಾಹ ಮುಲ್ತಾನಿ ಎಂಬುವವನು ಗೋ ಶಾಲೆಯಲ್ಲಿದ್ದ ಹಸುಗಳನ್ನು ಬಿಡಿಸಿಕೊಂಡು ಬರುತ್ತಿರುವ ಸಂದರ್ಭದಲ್ಲಿ ಹಸುಗಳನ್ನು ಕಸಾಯಿ ಖಾನೆಗೆ ತೆಗೆದುಕೊಂಡು ಹೋಗುತ್ತಿರಬಹುದು ಎಂದು ಶ್ರೀರಾಮ ಸೇನೆ ಕಾರ್ಯಕರ್ತರು ಮತ್ತೆ ವಾಹನದ ಬೆನ್ನು ಹತ್ತಿದ್ದಾರೆ. ಈ ವೇಳೆ ಮುಲ್ತಾನಿ ಎಂಬುವವರ ಮನೆಗೆ ನುಗ್ಗಿ ಗಲಾಟೆ ನಡೆಸಿದ್ದಾರೆ. ಈ ವೇಳೆ ಮಹಿಳೆಯರು ಮಾತ್ರ ಮನೆಯಲ್ಲಿದ್ದ ಕಾರಣ ಚಿರಾಟ ನಡೆಸಿದ್ದರಿಂದ ಸುತ್ತಮುತ್ತಲಿನ ನಿವಾಸಿಗಳು ಈ ಐವರನ್ನು ಹಿಡಿದು ಮರಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗದೆ ಎಂದರು.

ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ದೂರು

ಹುಕ್ಕೇರಿ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಅಕ್ರಮವಾಗಿ ಮನೆಗೆ ನುಗ್ಗಿರುವ ವಿಷಯಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಮಹಿಳೆಯರು ನಾಲ್ವರು ವಿರುದ್ಧ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಯಾರು ದೂರು ನೀಡಿಲ್ಲ. ಹೀಗಾಗಿ ಈ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗವುದು ಎಂದು ಎಸ್‌ಪಿ ಡಾ.ಭೀಮಾಶಂಕರ ಗುಳೇದ ಹೇಳಿದರು.

ಹುಕ್ಕೇರಿ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಶ್ರೀರಾಮ ಸೇನೆ ಐದು ಜನ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಹಾಕಿ ಹೊಡೆದಿರುವ ಪ್ರಕರಣದಲ್ಲಿ ಒಬ್ಬ ರೌಡಿ ಶೀಟರ್‌ಯಿದ್ದು, ಆತನನ್ನು ಕಲಬುರ್ಗಿ ಜಿಲ್ಲೆಗೆ ಗಡಿಪಾರು ಮಾಡಲಾಗಿತ್ತು. ಆದರೆ, ರೌಡಿ ಅಕ್ರಮವಾಗಿ ಬೆಳಗಾವಿ ಜಿಲ್ಲೆ ಪ್ರವೇಶಿಸಿ ಬಂದಿರುವ ಉದ್ದೇಶ ಏನೂ? ಎಂಬುದು ಗೊತ್ತಾಗಿಲ್ಲ. ಶ್ರೀರಾಮ ಸಂಘಟನೆ ಹೆಸರು ದುರ್ಬಳಕೆ ಮಾಡಿಕೊಳ್ಳಲು ಏಕೆ ಅವಕಾಶ ನೀಡಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು. ಡಾ.ಭೀಮಾಶಂಕರ ಗುಳೇದ, ಎಸ್‌ಪಿ ಹುಕ್ಕೇರಿ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಮರಕ್ಕೆ ಕಟ್ಟಿ ಹಾಕಿ ಹೊಡೆದಿರುವ ಪ್ರಕರಣ ವೈಯಕ್ತಿಕವಾಗಿದೆ. ಇದರಲ್ಲಿ ಹಿಂದು, ಮುಸ್ಲಿಂ ಎಂಬ ವಿಷಯ ಬರುವುದಿಲ್ಲ. ತಪ್ಪಿತಸ್ಥರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಸತೀಶ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net