ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷ ಸಜ್ಜುಗೊಳಿಸಲು ಜಿಲ್ಲಾ ಪ್ರವಾಸ

By vijaendra
Published on

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸಭೆಗಳನ್ನು ನಡೆಸುವ ಮೂಲಕ ಪಕ್ಷವನ್ನು ಚುನಾವಣೆಗೆ ಸಜ್ಜುಗೊಳಿಸಲು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಮುಂದಾಗಿದ್ದಾರೆ.

ಲೋಕಸಭೆ ಚುನಾವಣೆಗೆ ಪಕ್ಷವನ್ನು ಸಂಘಟನೆ ಮಾಡಿದ ರೀತಿಯಲ್ಲಿಯೇ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಪಡೆಯಬೇಕಾದರೆ, ಅದಕ್ಕಾಗಿ ಈಗಿನಿಂದಲೇ ತಯಾರಿ ಮಾಡಬೇಕು ಎನ್ನುವ ನಿಟ್ಟಿನಲ್ಲಿ ತಯಾರಿ ಶುರು ಮಾಡುವಂತೆ ವಿಜಯೇಂದ್ರ ಅವರು ಸೂಚಿಸಿದ್ದಾರೆ.

ತಾವು ಕೂಡ ಜಿಲ್ಲಾ ಮಟ್ಟದಲ್ಲಿ ಪ್ರವಾಸ ಮಾಡಲಿದ್ದು, ಆ ಸಮಯದಲ್ಲಿ ಕಾರ್ಯಕರ್ತರ ಸಭೆಯನ್ನು ನಡೆಸುವ ಮೂಲಕ ಚುನಾವಣೆಗೆ ವೇದಿಕೆಯನ್ನು ಈಗಿನಿಂದಲೇ ಸಜ್ಜುಗೊಳಿಸಲು ಮುಂದಾಗಬೇಕು. ಅದೇ ರೀತಿ ಜಿಲ್ಲಾ ಮಟ್ಟದ ಮುಖಂಡರು, ಮಾಜಿ ಶಾಸಕರು ಮತ್ತು ಮಾಜಿ ಸಚಿವರುಗಳು ಕೂಡ ತಾಲೂಕು ಮಟ್ಟದಲ್ಲಿ ಪ್ರವಾಸ ಮಾಡುವ ಮೂಲಕ ತಾಲೂಕು ಮತ್ತು ಗ್ರಾಪಂ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಬೇಕು ಎಂದು ಸೂಚನೆಯನ್ನು ನೀಡಲಾಗಿದೆ ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net