ಶಿವಮೊಗ್ಗ ಜಿಲ್ಲೆಯಲ್ಲಿ ಡಿಜೆ ಬಳಕೆ ನಿಷಿದ್ಧ

Gurudatt hegade
Published on

ಶಿವಮೊಗ್ಗ: ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ತೀವ್ರ ಮುನ್ನೆಚ್ಚರಿಕೆ ವಹಿಸುತ್ತಿದೆ. ಅಹಿತಕರ ಘಟನೆಗಳು ನಡೆಯದಂತೆ ವ್ಯಾಪಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಒಂದೆಡೆ ಜಿಲ್ಲಾ ರಕ್ಷಣಾಧಿಕಾರಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಂಗಳವಾರ ಹಲವು ಆದೇಶಗಳನ್ನು ಹೊರಡಿಸಿದ್ದಾರೆ.

ಆ.27ರಿಂದ ಸೆ.15ರವರೆಗೆ ಬೈಕ್ ರ‌್ಯಾಲಿ, ಡಿಜೆ ಸಿಸ್ಟಂ ಬಳಕೆ ನಿಷೇಧಿಸಲಾಗಿದೆ. ಗಣೇಶನ ಹಬ್ಬದ ಆರಂಭದಿಂದ ಬಹುತೇಕ ಎಲ್ಲ ಗಣೇಶ ಮೂರ್ತಿಗಳ ವಿಸರ್ಜನೆ ಹಾಗೂ ಈದ್ ಮಿಲಾದ್ ಹಬ್ಬ ಮುಗಿಯುವವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ. ಡಿಜೆ ಸಿಸ್ಟಂ ಬಳಸುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುತ್ತದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಮ್ಮ ಅದೇಶದಲ್ಲಿ ತಿಳಿಸಿದ್ದಾರೆ.

ನದಿಗಳು, ಕೆರೆಗಳು ಹಾಗೂ ಹಿನ್ನೀರು ಪ್ರದೇಶಗಳಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು ತೆಪ್ಪ ಬಳಕೆ ಮಾಡಿದಲ್ಲಿ ಕಡ್ಡಾಯವಾಗಿ 3-4 ಜನರು ಮಾತ್ರ ತೆಪ್ಪದಲ್ಲಿ ತೆರಳಬೇಕು. ಎಲ್ಲರೂ ಲೈಫ್ ಜಾಕೆಟ್ ಧರಿಸಿರಬೇಕು. ನುರಿತ ಈಜುಗಾರರು ಸ್ಥಳದಲ್ಲಿರುವಂತೆ ನೋಡಿಕೊಳ್ಳಬೇಕೆಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net