

ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಜೆಡಿಎಸ್ ನಾಯಕರು ಒತ್ತಾಯಿಸಿದ್ದಾರೆ. ಅವರನ್ನು ತೆಗೆದುಹಾಕಲು ಕೋಳಿ ಮರಿಯೇ? ಎಂದು ಚೆಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ, ರಾಹುಲ್ ಗಾಂಧಿಯವರನ್ನು ಎಚ್‌ಡಿಕೆ ಏಕವಚನದಲ್ಲಿ ಸಂಬೋಧಿಸುತ್ತಿದ್ದಾರೆ. ಮೊದಲು ಏಕವಚನದಲ್ಲಿ ಮಾತನಾಡುವುದು, ಗದರಿಸಿ ಮಾತನಾಡುವುದನ್ನು ನಿಲ್ಲಿಸಬೇಕು. ನಿಮಗಿಂತ ಚೆನ್ನಾಗಿ ಏಕವಚನದಲ್ಲಿ ಮಾತನಾಡಲು ನಮಗೆ ಸಾಧ್ಯವಾಗುತ್ತದೆ ಎಂದರು.
ಒಕ್ಕಲಿಗ ಸಮಾಜವನ್ನು ಈ ವಿಚಾರದಲ್ಲಿ ಎಳೆದು ತರುವುದು ಒಳ್ಳೆಯದಲ್ಲ. ನಾವು, ನೀವು ಈ ಸಮಾಜಕ್ಕೆ ಕಟ್ಟಾಳುಗಳಲ್ಲ. ಸಂದರ್ಭ ಬಂದಾಗ ಸಮಾಜ ನಮ್ಮನ್ನು, ನಿಮ್ಮನ್ನು ಬೆಂಬಲಿಸುತ್ತದೆ. ಸಮಾಜವು ಒಂದಷ್ಟು ಜನರಿಗೆ ಹೆಚ್ಚು, ಕಡಿಮೆ ಆಶೀರ್ವಾದ ಮಾಡಿರಬಹುದು. ಆದರೆ ಎಲ್ಲವೂ ನಮ್ಮದೇ ಹಿಡಿತದಲ್ಲಿ ಇದೆ ಎಂದು ಬಾವಿಸುವುದು ತಪ್ಪು. ಸಮುದಾಯದವರು ನಮಗೂ, ನಿಮಗೂ ಆಶೀರ್ವಾದ ಮಾಡಿದ್ದಾರೆ ಎಂದು ಎಚ್‌ಡಿಕೆ ಉದ್ದೇಶಿಸಿ ಹೇಳಿದರು.