ಹೆಲಿಕಾಪ್ಟರ್ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳಿಗೆ ಡಿಕೆಶಿ ಹೇಳಿದ್ದಿಷ್ಟು…

DKS
Published on

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿನ್ನೆ ಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದರು. ಚುನಾವಣಾ ನೀತಿ ಸಂತಿಹೆ ಜಾರಿಯಲ್ಲಿರುವುದರಿಂದ ಅಧಿಕಾರಿಗಳು ಡಿಕೆಶಿ ಪತ್ನಿ ಬಂದಿದ್ದ ಹೆಲಿಕಾಫ್ಟರ್ ಪರಿಶೀಲನೆ ಮುಂದಾದ ವೇಳೆ ಪೈಲಟ್ ನಿರಾಕರಿಸಿದ್ದರು. ಈ ವೇಳೆ ಸ್ಥಳದಲ್ಲಿ ಕೊಂಚ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಇದು ಖಾಸಗಿ ಹೆಲಿಕಾಪ್ಟರ್, ಪರಿಶೀಲಿಸಲು ಅವಕಾಶವಿಲ್ಲವೆಂದು ಪೈಲಟ್ ವಾದಿಸಿದ್ದರು.

ಟ್ವೀಟ್ ಮಾಡಿ ಆಕ್ರೋಶ

ಇಂದು ಕೂಡ ಚುನಾವಣಾ ಅಧಿಕಾರಿಗಳು ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನ್ನು ಪರಿಶೀಲನೆ ನಡೆಸಿದ್ದಾರೆ. ಇದು ಡಿ.ಕೆ.ಶಿವಕುಮಾರ್ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಪ್ರಚಾರಕ್ಕೆ ತೆರಳಬೇಕು

ಚುನಾವಣಾ ಆಯೋಗದ ಅಧಿಕಾರಿಗಳು ನಿನ್ನೆ ಮತ್ತು ಇಂದು ಎರಡೂ ದಿನ ನನ್ನ ಹೆಲಿಕಾಪ್ಟರ್‌ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ಪ್ರತಿದಿನ ಪರಿಶೀಲಿಸಲು ನನ್ನ ಅಭ್ಯಂತರವೇನಿಲ್ಲ. ಆದರೆ, ಕಾಲಮಿತಿಯೊಳಗೆ ಪರಿಶೀಲನೆ ಮುಗಿಸಿ ಚುನಾವಣಾ ಪ್ರಚಾರಕ್ಕೆ ತೆರಳಲು ಅನುವು ಮಾಡಿಕೊಡಬೇಕು ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ.

ಡಿಕೆಶಿ ಟೆಂಪಲ್ ರನ್

ಅಭ್ಯರ್ಥಿಗಳೆಲ್ಲ ನಾಮಪತ್ರ ಸಲ್ಲಿಸಿದ್ದು, ಇದೀಗ ಚುನಾವಣೆ ದಿನಕ್ಕೆ ಎದರು ನೋಡುತ್ತಿದ್ದಾರೆ. ಪಕ್ಷದ ಪ್ರಮುಖ ನಾಯಕರು ಇದೀಗ ರೋಡ್​ ಶೋ ಮೂಲಕ ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಶತಾಯಗತಾಯ ಈ ಬಾರಿ ಕಾಂಗ್ರೆಸ್​​ನ್ನು ಅಧಿಕಾರ ತರಲು ಪ್ರಯತ್ನಿಸುತ್ತಿದ್ದಾರೆ. ಈ ನಡುವೆ ಧರ್ಮಸ್ಥಳ, ಶೃಂಗೇರಿ ದೇವಸ್ಥಾನಗಳಿಗೆ ಡಿಕೆಶಿ ಕುಟುಂಬ ಸಮೇತ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net