ಬಿಜೆಪಿ ಆಡಳಿತದ ಕರ್ಮಕಾಂಡಗಳನ್ನು ಬಿಚ್ಚಿಡುವ ಕಾಲ ಹತ್ತಿರದಲ್ಲಿದೆ: ಡಿಕೆಶಿ

Dk Shivakumar
Published on

ಬೆಂಗಳೂರು: ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್ ಬಿಡುಗಡೆ ಮಾಡಿರುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು, 'ಅದರಲ್ಲಿ ಇರುವುದನ್ನು ಒಂದೇ ಒಂದು ಸಾಬೀತು ಮಾಡಲಿ. ಅವರ ಕರ್ಮಕಾಂಡಗಳನ್ನು ಬಿಚ್ಚಿಡುವ ಕಾಲ ಹತ್ತಿರದಲ್ಲಿದೆ. ಚಾರ್ಜ್ ‌ಶೀಟ್ ಎಂದರೆ ಏನು? ಅವರಿಗೆ ತಮ್ಮ ನಾಯಕನನ್ನು ಆಯ್ಕೆ ಮಾಡಿಕೊಳ್ಳುವ ಸಾಮರ್ಥ್ಯವಿಲ್ಲ' ಎಂದು ಹೇಳಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಳೊಂದಿಗೆ ಬುಧವಾರ ಮಾತನಾಡುತ್ತಾ, ಡಿ.ಕೆ.ಶಿವಕುಮಾರ್ 10-15 ಪರ್ಸೆಂಟ್ ಕಮಿಷನ್ ಕೇಳಿದರು ಎಂದು ಗುತ್ತಿಗೆದಾರರಿಗೆ ಹೆದರಿಸಿ ಅವರ ಬಾಯಲ್ಲಿ ರಾಜ್ಯಪಾಲರ ಬಳಿ ಸುಳ್ಳು ಹೇಳಿಸಿದರು. ಆನಂತರ ಅದೇ ಗುತ್ತಿಗೆದಾರರು ಪೊಲೀಸರ ಬಳಿ, ರಾಜ್ಯಪಾಲರ ಬಳಿ ನಾವು ಆರೋಪ ಮಾಡಿಲ್ಲ ಎಂದು ಸತ್ಯ ಹೇಳಿದರು ಎಂದು ವಾಗ್ದಾಳಿ ನಡೆಸಿದರು.

ಏನಿದು ಚಾರ್ಜ್​ಶೀಟ್? 

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಮೊದಲ ನೂರು ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿಯು ಸರ್ಕಾರದ ವೈಫಲ್ಯಗಳ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಗೊಂಡಿರುವ ವರದಿಗಳನ್ನು ಒಳಗೊಂಡ ‘ಕೈಕೊಟ್ಟಯೋಜನೆಗಳು; ಹಳಿ ತಪ್ಪಿದ ಆಡಳಿತ’ ಎಂಬ ಆರೋಪಪಟ್ಟಿ ರೂಪದ ಪುಸ್ತಕವೊಂದನ್ನು ಬಿಡುಗಡೆ ಮಾಡಿದೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಈ ಕಿರುಹೊತ್ತಿಗೆ ಬಿಡುಗಡೆಗೊಳಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net