ಮೆಂಟಲ್​​ಗಳು​​​​ ಸುಮ್ನೆ ಮಾತಾಡ್ತಾರೆ: ಡಿಕೆಶಿ ಹೀಗೆ ಹೇಳಿದ್ದು ಯಾರ ಬಗ್ಗೆ?

DKS 5 June 20
Published on

ಬೆಂಗಳೂರು: ಕೆಲವು ಮೆಂಟಲ್ಗಳು ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಚುನಾವಣೆಯನ್ನು ಕಡಲೆಪುರಿ ವ್ಯಾಪಾರ ಎಂದು ಭಾವಿಸಿ 20, 30 ಎಂದು ನಂಬರ್ ಹೇಳುತ್ತಿದ್ದಾರೆ ಎಂದು ಬಿಜೆಪಿಗೆ ವಲಸೆ ಹೋಗಿ ಸಚಿವರಾದವರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹರಿಹಾಯ್ದಿದ್ದಾರೆ.

ಸಚಿವ ರಮೇಶ್ ಜಾರಕಿಹೊಳಿ ಮತ್ತಿತರರು ನಮ್ಮ ಸಂಪರ್ಕದಲ್ಲಿ ಕಾಂಗ್ರೆಸ್‌ನ 22 ಶಾಸಕರಿದ್ದಾರೆಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಸಚಿವರ ಹೇಳಿಕೆ ಬಗ್ಗೆ ಡಿಕೆಶಿ ಹರಿತ ಶಬ್ದಗಳಲ್ಲಿ ಕುಟುಕಿದ್ದಾರೆ.

ಈ ಸಂದರ್ಭದಲ್ಲಿ ನಮ್ಮ ಶಾಸಕರಿಗೆ ಅಗೌರವ ಮಾಡುವುದು ಬೇಡ. ಯಾವ ಮಂತ್ರಿ ಯಾವ ಹೇಳಿಕೆ ನೀಡುತ್ತಿದ್ದಾರೆ, ಯಾವ ಹೊಟೇಲ್ನಲ್ಲಿ ಯಾರು ಸಭೆ ನಡೆಸುತ್ತಿದ್ದಾರೆ, ನಿನ್ನೆ ರಾತ್ರಿ ಯಾರು, ಎಲ್ಲಿ, ಏನು ಸಭೆ ನಡೆಸಿದ್ದಾರೆ ಎಂಬುದನ್ನು ಗಮನಿಸುತ್ತಿದ್ದೇವೆ. ನಾವಿಲ್ಲಿ ಸುಮ್ಮನೆ ಕೂತಿಲ್ಲ ಎಂದರು.

ನಮಗೆ ಬೇರೆಯವರ ಮನೆ ವಿಚಾರ ಬೇಡ. ನಾವುಂಟು ನಮ್ಮ ಮನೆಯುಂಟು, ನಮ್ಮ ಶಾಸಕರುಂಟು. ನಮ್ಮ ಪಕ್ಷದ ನಾಯಕರೂ ಬೇರೆ ಪಕ್ಷದ ಆಂತರಿಕ ವಿಚಾರದ ಬಗ್ಗೆ ಹೇಳಿಕೆ ನೀಡದಂತೆ ಎಚ್ಚರಿಕೆ ವಹಿಸಬೇಕೆಂದು ಸೂಚಿಸಿದ್ದೇನೆ ಎಂದು ಡಿಕೆಶಿ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net