ಪೆನ್ ಡ್ರೈವ್ ಪ್ರಕರಣ; ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಕಟ್ಟಿಹಾಕಿರುವವರು ಯಾರು: ಡಿಸಿಎಂ ಡಿ.ಕೆ.ಶಿವಕುಮಾರ್

Dk Shivakumar
Published on

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಪೆನ್​ಡ್ರೈವ್​ ಪ್ರಕರಣ ಭಾರೀ ಕೋಲಾಹಲಕ್ಕೆ ಕಾರಣವಾಗಿದ್ದು ಕಾಂಗ್ರೆಸ್​ ಹಾಗೂ ಜೆಡಿಎಸ್​ ನಾಯಕರ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಪೆನ್​ಡ್ರೈವ್​ ಪ್ರಕರಣ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್​ ನಡುವಿನ ವಾಕ್ಸಮರಕ್ಕೆ ಕಾರಣವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ. ಶಿವಕುಮಾರ್​ ಮಾಜಿ ಸಿಎಂ ಎಚ್​ಡಿಕೆ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್​ ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಹಿಡಿದು ನಿಲ್ಲಿಸಿಕೊಂಡಿರುವವರು ಯಾರು, ಕಟ್ಟಿ ಹಾಕಿರುವವರು ಯಾರು ಎಂದು ಪ್ರಶ್ನಿಸಿದ್ದಾರೆ.

ಅವರನ್ನು ಹೋರಾಟ ಮಾಡದಂತೆ ಯಾರೂ ತಡೆದಿಲ್ಲ, ಅವರು ಹೋರಾಟ ಮಾಡಲಿ. ಆಂಧ್ರಪ್ರದೇಶದ ಚುನಾವಣಾ ಪ್ರಚಾರದಿಂದ ವಾಪಸು ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ. ಈ ವಿಚಾರದಲ್ಲಿ ನಾನು ಏನು ಹೇಳಬೇಕೋ ಅದನ್ನೆಲ್ಲಾ ಈಗಾಗಲೇ ಹೇಳಿ ಆಗಿದೆ. ಈಗ ನಾನು ಏನೂ ಹೇಳಬೇಕಿಲ್ಲ. ಮಿಕ್ಕಿದ್ದೆಲ್ಲಾ ವಿಧಾನಸಭೆ ಅಧಿವೇಶನ ಕಲಾಪದಲ್ಲಿ ಚರ್ಚೆ ಮಾಡೋಣ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net