ಪಿತೂರಿ ಬಗ್ಗೆ ಮಾಹಿತಿ ಇದೆಯೆಂದ ಡಿ.ಕೆ ಶಿವಕುಮಾರ್

dk shivakumar
Published on

ಬೆಂಗಳೂರು: ನಮ್ಮ ಸರ್ಕಾರದ ವಿರುದ್ಧ ಕೆಲವರು ಪಿತೂರಿ ನಡೆಸುತ್ತಿರುವ ಬಗ್ಗೆ ನಮಗೂ ಮಾಹಿತಿ ಇದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

ಸರ್ಕಾರ ಉರುಳಿಸಲು ಕೆಲವರು ಸಿಂಗಾಪುರದಲ್ಲಿ ಪಿತೂರಿ ಯೋಜಿಸಿದ್ದಾರಂತಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ಆ ಬಗ್ಗೆ ನನಗೂ ನಮ್ಮದೇ ಆದ ಮೂಲಗಳಿಂದ ಮಾಹಿತಿ ಇದೆ. ಅವರು ಬೆಂಗಳೂರಲ್ಲಿ ಮಾಡದೇ ಅಲ್ಲಿಗೆ ಹೋಗಿ ಮಾಡುವುದು ಅವರ ತಂತ್ರ. ಯಾರು ಏನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ ಎಂದರು.

ಫೆರಿಫೆರಲ್ ರಿಂಗ್ ರಸ್ತೆ ಭೂ ಸ್ವಾಧೀನ ವಿಚಾರವಾಗಿ ಆ ಭಾಗದ ಕೆಲ ರೈತರು ಇಂದು ನನ್ನನ್ನು ಭೇಟಿ ಮಾಡಿದ್ದಾರೆ. ಇದೇ ತಿಂಗಳು 31 ರಂದು ಆ ರೈತರ ಜತೆ ಸಭೆ ಮಾಡುವುದಾಗಿ ತಿಳಿಸಿದ್ದೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net