ಈಶ್ವರಪ್ಪ 'ಲವ್ ಲೆಟರ್' ಕಳುಹಿಸಿಕೊಟ್ಟಿದ್ದಾರೆ; ಡಿಕೆಶಿ ವ್ಯಂಗ್ಯ

D K Shivakumar
Published on

ಬೆಂಗಳೂರು: ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದು, “ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗಲು ಬಯಸಿದ್ದೇನೆ” ಎಂದು ಈಶ್ವರಪ್ಪ ತಿಳಿಸಿದ್ದಾರೆ.

ಲವ್ ಲೆಟರ್ ಕಳುಹಿಸಿದ್ದಾರೆ!

ಈಶ್ವರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿ, ಈಶ್ವರಪ್ಪನವರು ''ಲವ್ ಲೆಟರ್'' ಕಳುಹಿಸಿಕೊಟ್ಟಿದ್ದಾರೆ. ಬಿಜೆಪಿಯಿಂದ ಇನ್ನಷ್ಟು ಜನರು ಲೆಟರ್ ಕೊಡುವವರು ಬಾಕಿ ಇದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಒಳ್ಳೆಯ ಮುಹೂರ್ತ ನೋಡುತ್ತಿದ್ದೇನೆ...

ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರವಾಗಿ ಮಾತನಾಡುತ್ತಾ, ಕಾಂಗ್ರೆಸ್ ಈಗಾಗಲೇ 175 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದೇವೆ. ಉಳಿದ ಕ್ಷೇತ್ರಗಳಿಗೆ ಯಾರು ಅಭ್ಯರ್ಥಿ ಎಂಬುದರ ಬಗ್ಗೆ ಒಳ್ಳೆಯ ಮುಹೂರ್ತ ನೋಡಿ ಸಧ್ಯದಲ್ಲೇ ಘೋಷಣೆ ಮಾಡುತ್ತೇವೆ ಎಂದು ಡಿಕೆಶಿ ಸ್ಪಷ್ಟಪಡಿಸಿದರು.

ಮೂರನೇ ಪಟ್ಟಿ ಬಿಡುಗಡೆ ಮಾಡಲು ಒಳ್ಳೆಯ ಮುಹೂರ್ತ ನೋಡುತ್ತಿದ್ದೇನೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಯಾಕೆ ಆಗಿಲ್ಲೆ ಎಂದು ಕಾಂಗ್ರೆಸ್​ನ್ನು ಪ್ರಶ್ನಿಸಬೇಡಿ. ಬಿಜೆಪಿ ಇದುವರೆಗೂ ಒಂದೇ ಒಂದು ಪಟ್ಟಿಯನ್ನೂ ಬಿಡುಗಡೆ ಮಾಡಿಲ್ಲ. ಅವರನ್ನು ಪ್ರಶ್ನಿಸಬೇಕಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net