ಡಿಕೆಶಿ ಡಿಸಿಎಂ: ಪೂರ್ತಿ ಸಂತೋಷ ಇಲ್ಲ ಎಂದ ಸಹೋದರ ಸುರೇಶ್

dk suresh
Published on

ಬೆಂಗಳೂರು: ಮುಂದಿನ ಸಿಎಂ ಯಾರು ಎನ್ನುವ ಬಗ್ಗೆ ಅಧಿಕೃತ ಘೋಷಣೆ ಆಗಿಲ್ಲವಾದರೂ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎನ್ನುವ ವಿಚಾರ ಈಗಾಗಲೇ ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಇದೀಗ ಡಿಕೆ ಶಿವಕುಮಾರ್ ಸಹೋದರ ಡಿಕೆ ಸುರೇಶ್​ರನ್ನು ಸುದ್ದಿಗಾರರು ಮಾತನಾಡಿಸಿದಾಗ ನಿರ್ಧಾರದ ಬಗ್ಗೆ ಕೇಳಿದಾಗ ಪೂರ್ಣ ಸಂತೋಷವಿಲ್ಲ ಎಂದಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಡಿಕೆ ಸುರೇಶ್, "ನನಗೆ ಇದರ ಬಗ್ಗೆ ಪೂರ್ಣ ಸಂತೋಷವಿಲ್ಲ. ಆದರೆ ಕರ್ನಾಟಕದ ಹಿತದೃಷ್ಟಿಯಿಂದ ನಾವು ನಮ್ಮ ಬದ್ಧತೆಯನ್ನು ಪೂರೈಸಲು ಬಯಸಿದ್ದೇವೆ... ಅದಕ್ಕಾಗಿಯೇ ಡಿಕೆ ಶಿವಕುಮಾರ್ ಒಪ್ಪಿಕೊಳ್ಳಬೇಕಾಯಿತು. ಭವಿಷ್ಯದಲ್ಲಿ ನೋಡೋಣ.  ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಹಾರೈಸುತ್ತೇನೆ. ಆದರೆ ಅದು ಆಗಲಿಲ್ಲ, ಕಾದು ನೋಡೋಣ" ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net