ರಾಜ್ಯ ವಿಧಾನಸಭೆ ಚುನಾವಣೆ; ಕಷ್ಟದ ದಿನಗಳನ್ನು ನೆನೆದು ಡಿಕೆಶಿ ಭಾವುಕ

DKS tears
Published on

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷ ಪ್ರಚಂಡ ದಿಗ್ವಿಜಯ ಸಾಧಿಸಿದ್ದು ನಾಯಕರು ಹಾಗೂ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲುಮುಟ್ಟಿದೆ.

ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ರಾಜ್ಯದ ಜನತೆಗೆ ಧನ್ಯವಾದಗಳನ್ನು ತಿಳಿಸಿದ್ದು ಮಾತನಾಡುವ ವೇಳೆ ಭಾವುಕರಾಗಿದ್ದಾರೆ.

ಕಷ್ಟದ ದಿನಗಳನ್ನು ನೆನೆದು ಭಾವುಕ

ಇನ್ನು ಈ ಕುರಿತು ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್​ ಕಾಂಗ್ರೆಸ್​ ಪಕ್ಷದ ಮೇಲೆ ನಂಬಿಕೆ ಇಟ್ಟು ಮತದಾನ ಮಾಡಿದ ಕರ್ನಾಟಕದ ಜನತೆಗೆ ನನ್ನ ಸಾಷ್ಟಾಂಗ ನಮಸ್ಕಾರಗಳು.

DKS

ಮಾತನಾಡುವ ವೇಳೆ ತಾವು ಜೈಲಿಗೆ ಹೋದ ದಿನಗಳನ್ನು ನೆನೆದು ಭಾವುಕರಾದ ಡಿಕೆಶಿ ಪಕ್ಷದ ನಾಯಕರು ತಮ್ಮ ಬೆಂಬಲಕ್ಕೆ ನಿಂತಿದ್ದನ್ನು ಸ್ಮರಿಸಿದರು.

ಬೆಂಬಲ ನೆನೆದು ಕಣ್ಣೀರು

ಇದೇ ವೇಳೆ ಸೋನಿಯಾ ಗಾಂಧಿ, ರಾಹುಲ್​ ಗಾಂಧಿ, ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್​ ಪಕ್ಷದ ರಾಷ್ಟ್ರೀಯ ನಾಯಕರು ತಾವು ಜೈಲಿಗೆ ಹೋದ ಸಂದರ್ಭದಲ್ಲಿ ನೀಡಿದ ಬೆಂಬಲವನ್ನು ಸ್ಮರಿಸಿದ್ದಾರೆ.

ಇನ್ನು ಕನಕಪುರದಲ್ಲಿ ಬಿಜೆಪಿ ಅಭ್ಯರ್ಥಿ ಆರ್​. ಅಶೋಕ್​ ವಿರುದ್ಧ 1 ಲಕ್ಷಗಳ ಅಂತರದಲ್ಲಿ ಭರ್ಜರಿ ಜಯಸಾಧಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ತಾವು ರಾಮನಗರಕ್ಕೆ ಭೇಟಿ ನೀಡುತ್ತಿರುವುದಾಗಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net