ಅರುಣಾಚಲೇಶ್ವರದ ದರ್ಶನ ಪಡೆದ ಡಿಕೆಶಿ

dk shivakumar
Published on

ಬೆಂಗಳೂರು: ಮುಡಾ ಪ್ರಕರಣದ ತೀವ್ರತೆ ಕಾರಣಕ್ಕೆ ತೆರೆಮರೆಯಲ್ಲಿ ಒಂದಷ್ಟು ರಾಜಕೀಯ ಚಟುವಟಿಕೆ ನಡೆದಿರುವ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮಿಳುನಾಡಿನ ತಿರುವಣ್ಣಾಮಲೈನ ಅರುಣಾಚಲೇಶ್ವರ ದೇಗುಲಕ್ಕೆ ಸೋಮವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ಕಳೆದ ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಮುಂಚಿತವಾಗಿ ಈ ದೇವಾಲಯಕ್ಕೆ ಭೇಟಿ ನೀಡಿ, ರಾಜ್ಯದಲ್ಲಿ ಉತ್ತಮ ಆಡಳಿತ ಮಾಡುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದ್ದೆ ಎಂದು ಹೇಳಿದ್ದಾರೆ.
ಈ ಕಾರಣಕ್ಕೆ ಮತ್ತೆ ದೇವರ ದರ್ಶನ ಮಾಡಿದೆ. ಎಲ್ಲರ ಒಳಿತಿಗಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net