ಭಿನ್ನಾಭಿಪ್ರಾಯಕ್ಕೆ ಅವಕಾಶ ನೀಡದಿರಿ

21-GPT-1
ಗುಂಡ್ಲುಪೇಟೆ ಪಟ್ಟಣದ ಸಿ.ಎಂ.ಎಸ್.ಕಲಾಮಂದಿರದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ನಿರಂಜನಕುಮಾರ್ ಮಾತನಾಡಿದರು. ಸಿ.ಮಹದೇವಪ್ರಸಾದ್, ಸುರೇಶ್, ಮಲ್ಲೇಶ್ ಇದ್ದರು.
Published on

ಗುಂಡ್ಲುಪೇಟೆ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಕಾರ್ಯಕರ್ತರು ಹಾಗೂ ಮುಖಂಡರು ಶ್ರಮಿಸಬೇಕು ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನಕುಮಾರ್ ಮನವಿ ಮಾಡಿದರು.

ಗುರುವಾರ ಪಟ್ಟಣದ ಸಿ.ಎಂ.ಎಸ್. ಕಲಾಮಂದಿರದಲ್ಲಿ ಆಯೋಜಿಸಿದ್ದ ಬಿಜೆಪಿ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಮಾ.25ರಂದು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜು ಅವರ ಪರ ಚುನಾವಣಾ ಪ್ರಚಾರ ಆಂದೋಲನ ಸಭೆಯನ್ನು ಆಯೋಜಿಸಲಾಗಿದ್ದು, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿ ಮಾಡಲು ಜಿಲ್ಲೆಯಲ್ಲಿ ಕಮಲ ಮತ್ತೆ ಅರಳಬೇಕು. ಆದ್ದರಿಂದ ಕಾರ್ಯಕರ್ತರು ಹಾಗೂ ಮುಖಂಡರು ಯಾವುದೇ ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡದೆ ಮೈತ್ರಿ ಪಕ್ಷವಾದ ಜಾ.ದಳ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಜತೆ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

ಮಂಡಲಾಧ್ಯಕ್ಷ ಸಿ.ಮಹದೇವ ಪ್ರಸಾದ್, ನಿರ್ಗಮಿತ ಅಧ್ಯಕ್ಷರಾದ ಡಿ.ಪಿ.ಜಗದೀಶ್, ಎಲ್.ಸುರೇಶ್, ಜಿಲ್ಲಾ ಉಪಾಧ್ಯಕ್ಷ ಹಿರೀಕಾಟಿ ಸೋಮಶೇಖರ್, ಮುಖಂಡರಾದ ಎನ್.ಮಲ್ಲೇಶ್, ಮಹದೇವಶೆಟ್ಟಿ, ಮೂಡ್ನಾಕೂಡು ಪ್ರಕಾಶ್, ಮಾಧ್ಯಮ ಸಂಚಾಲಕ ಎಸ್.ಸಿ.ಮಂಜುನಾಥ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹಂಗಳ ಪ್ರಣಯ್, ತಾಪಂ ಮಾಜಿ ಸದಸ್ಯರಾದ ಪ್ರಭಾಕರ್, ರೇವಣ್ಣ ಸೇರಿದಂತೆ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net