ವಿದ್ಯಾರ್ಥಿಗಳಿಗೆ ಹಾಸ್ಟೆಲ್​ ಖಾಲಿ ಮಾಡುವಂತೆ ಒತ್ತಾಯಿಸಬೇಡಿ

26 chn-hostel
Published on

ಬೆಂಗಳೂರು: ಕೆಲ ಶೈಕ್ಷಣಿಕ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ವಸತಿ ನಿಲಯಗಳನ್ನು ಖಾಲಿ ಮಾಡುವಂತೆ ಒತ್ತಾಯಿಸುತ್ತಿರುವುದು ಕಂಡು ಬಂದಿದೆ.

ಈ ಹಿನ್ನೆಲೆಯಲ್ಲಿ ಪ್ರತ್ಯೇಕ ಸುತ್ತೋಲೆಯೊಂದನ್ನು ಹೊರಡಿಸಿರುವ ಉನ್ನತ ಶಿಕ್ಷಣ ಇಲಾಖೆ, ವಿದ್ಯಾರ್ಥಿಗಳನ್ನು ಒತ್ತಾಯಪೂರ್ವಕವಾಗಿ ಖಾಲಿ ಮಾಡಿಸದಂತೆ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ.

ರಾಜ್ಯಾದ್ಯಂತ ಕೋವಿಡ್​-19 ತೀವ್ರವಾಗಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಅವರಿರುವ ಸ್ಥಳದಲ್ಲಿಯೇ ಅಗತ್ಯ ಮುಂಜಾಗ್ರತೆ ವಹಿಸುವಂತೆ ಸೂಚಿಸಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ವಿದ್ಯಾರ್ಥಿಗಳಿಗೆ ಅಗತ್ಯ ವಸತಿ ವ್ಯವಸ್ಥೆ ಮಾಡುವುದು, ಅವರಿಗೆ ಅಗತ್ಯವಾದ ವಸ್ತುಗಳನ್ನು ಪೂರೈಸುವುದು ಹಾಗೂ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಪಾಲಿಸುವಂತೆ ನೋಡಿಕೊಳ್ಳಬೇಕೆಂದು ಉನ್ನತ ಶಿಕ್ಷಣ ಇಲಾಕೆಯ ಅಧೀನ ಕಾರ್ಯದರ್ಶಿ ಆರ್​. ಮಹೇಸ್​ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net