

ಬನ್ನೂರು: ಆರೋಗ್ಯದ ಬಗ್ಗೆ ನಿರ್ಲಕ್ಷೃ ವಹಿಸದೆ ಪ್ರತಿಯೊಬ್ಬರೂ ಕಾಲ ಕಾಲಕ್ಕೆ ತಪಾಸಣೆಗೆ ಒಳಗಾಗಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಉಮಾವತಿ ಹೇಳಿದರು.
ಸಮೀಪದ ಬಿ.ಬೆಟ್ಟಹಳ್ಳಿ ಗ್ರಾಮದ ಶ್ರೀರಂಗ ಜ್ಞಾನ ವಿಕಾಸ ಕೇಂದ್ರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಆಗುತ್ತಿರುವ ಆಹಾರ ಪದ್ಧತಿಯಲ್ಲಿನ ಬದಲಾವಣೆಗಳು ಮನುಷ್ಯನ ಆರೋಗ್ಯದ ಮೇಲೆ ಬಹಳಷ್ಟು ಪರಿಣಾಮ ಬೀರುತ್ತಿವೆ. ಮನೆಯಲ್ಲೇ ತಯಾರಿಸಿದ ಆಹಾರಕ್ಕೆ ಒತ್ತು ನೀಡಬೇಕು ಎಂದರು.
ಮಲಿಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಖಾ ಶಿಬಿರವನ್ನು ಉದ್ಘಾಟಿಸಿದರು.
ಸಾರ್ವಜನಿಕರು ರಕ್ತದೊತ್ತಡ, ಸಕ್ಕರೆ ಕಾಯಿಲೆ, ಹಲ್ಲಿನ ತಪಾಸಣೆ ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆಗೆ ಒಳಪಟ್ಟರು.
ವಲಯ ಮೇಲ್ವೀಚಾರಕ ಮುರಳಿ, ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಪ್ರಮೀಳಾ, ಒಕ್ಕೂಟದ ಅಧ್ಯಕ್ಷೆ ಲತಾ, ಜ್ಞಾನ ವಿಕಾಸ ಕೇಂದ್ರದ ಅಧ್ಯಕ್ಷೆ ಭಾರತಿ, ಸೇವಾ ಪ್ರತಿನಿಧಿ ಪಲ್ಲವಿ, ನೇತ್ರ ತಜ್ಞ ಡಾ. ರಂಗಸ್ವಾಮಿ, ಡಾ.ಶಬಾನಾ ಹುಸೇನ್, ಎನ್‌ಸಿಡಿ ಸಿಬ್ಬಂದಿ ಹಾಗೂ ಆಪ್ತ ಸಮಾಲೋಚಕ ರಾಜೇಂದ್ರ ಇತರರು ಇದ್ದರು.