

Monsoon season: ಮಳೆಗಾಲದಲ್ಲಿ ಸಾಮಾನ್ಯವಾಗಿ ರೋಗನಿರೋಧಕ ಶಕ್ತಿ ಕಡಿಮೆಯಾಗಿರುಯತ್ತದೆ, ಇದರಿಂದಾಗಿ ಅನೇಕ ಜನರು ಶೀತ ಮತ್ತು ಜ್ವರದಂತಹ ಸಮಸ್ಯೆಗಳಿಗೆ ತುತ್ತಾಗುತ್ತಾರೆ. ಕೆಲವರಿಗೆ ಪದೇ ಪದೇ ಜ್ವರ ಬರುತ್ತದೆ. ಆದರೆ, ಕೆಲವು ಹಣ್ಣುಗಳು ಮತ್ತು ಕೆಲವು ಪಾನೀಯಗಳನ್ನು ಸೇವಿಸುವುದರಿಂದ ಈ ಸಮಸ್ಯೆಯಿಂದ ಪರಿಹಾರ ಪಡೆಯಬಹುದು ಎಂದು ತಜ್ಞರು ಹೇಳುತ್ತಾರೆ. ಅವು ಯಾವವು ಎಂಬುದನ್ನು ಈಗ ತಿಳಿದುಕೊಳ್ಳೋಣ.
1. ಗಿಡಮೂಲಿಕೆ ಚಹಾ
ಮಳೆಗಾಲದಲ್ಲಿ ಗಿಡಮೂಲಿಕೆ ಚಹಾಗಳನ್ನು ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದರಲ್ಲಿನ ವಿಶೇಷ ಗುಣಗಳು ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತ ನಿವಾರಕ ಗುಣಗಳನ್ನು ಹೊಂದಿರುವುದರಿಂದ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
2. ಪ್ರೋಬಯಾಟಿಕ್ ಆಹಾರಗಳು
ಮೊಸರು, ಮಜ್ಜಿಗೆ ಮತ್ತು ಬೆಣ್ಣೆಯಂತಹ ಪ್ರೋಬಯಾಟಿಕ್ ಆಹಾರಗಳನ್ನು ಸೇವಿಸುವುದರಿಂದ ದೇಹಕ್ಕೆ ಸಾಕಷ್ಟು ಪ್ರೋಟೀನ್ ದೊರೆಯುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಡೈರಿ ಉತ್ಪನ್ನಗಳು, ಕಡಲೆ, ಬೇಳೆ ಮತ್ತು ಬೀನ್ಸ್ಗಳನ್ನು ಸಹ ಹೇರಳವಾಗಿ ಸೇವಿಸುವುದು ಉತ್ತಮ ಮಾರ್ಗ.
3. ಸಿಟ್ರಸ್ ಹಣ್ಣುಗಳು
ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಿಟ್ರಸ್ ಹಣ್ಣುಗಳು ಉತ್ತಮವಾಗಿವೆ. ಕಿತ್ತಳೆ, ಪಪ್ಪಾಯಿ, ನಿಂಬೆಹಣ್ಣು, ಚೆರ್ರಿ, ಪೇರಲ ಮತ್ತು ದಾಳಿಂಬೆ ಮುಂತಾದ ಹಣ್ಣುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಬೇಕು.
4. ಅರಿಶಿಣ
ಅರಿಶಿಣದಲ್ಲಿರುವ ಕರ್ಕ್ಯುಮಿನ್, ಉರಿಯೂತ ನಿವಾರಿಸುತ್ತದೆ ಮತ್ತು ದೇಹದಲ್ಲಿನ ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
5. ಪಪ್ಪಾಯ ಹಣ್ಣು
ಪಪ್ಪಾಯ ಹಣ್ಣಿನಲ್ಲಿ ವಿಟಮಿನ್ ಎ, ಸಿ ಮತ್ತು ಇ ಇದ್ದು, ಇವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಅತ್ಯಗತ್ಯ. ಇದು ಹೊಟ್ಟೆಯ ಆರೋಗ್ಯವನ್ನೂ ಸುಧಾರಿಸುತ್ತದೆ. ಪಪ್ಪಾಯಿಯನ್ನು ನಿಯಮಿತವಾಗಿ ಸೇವಿಸುವುದರಿಂದ ಸೋಂಕುಗಳಿಂದ ದೂರವಿರಬಹುದು.
ಗಮನಿಸಿ: ಈ ಮಾಹಿತಿಯನ್ನು ಅಂತರ್ಜಾಲದಿಂದ ಸಂಗ್ರಹಿಸಲಾಗಿದೆ ಮತ್ತು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಸ್ತುತ ಪಡಿಸಲಾಗಿದೆ. ಇದನ್ನು “ವಿಜಯವಾಣಿ ಡಾಟ್ ನೆಟ್" ದೃಢಪಡಿಸುವುದಿಲ್ಲ. ಯಾವುದೇ ಸಲಹೆಯನ್ನು ಅನುಸರಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಯಾವಾಗಲೂ ಉತ್ತಮ.