ನಿಮ್ಮ ಅಂಗೈನಲ್ಲಿ V ಚಿಹ್ನೆ ಇದೆಯಾ ನೋಡಿ… ಇದರ ಅರ್ಥ ತಿಳಿದ್ರೆ ನಿಮ್ಮ ಹುಬ್ಬೇರೋದು ಖಚಿತ!

V Symbol on Palm
Published on

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ ಏನಾಗುತ್ತದೆ? ಉದ್ಯೋಗ ಸಿಗುತ್ತದೆಯೇ ಅಥವಾ ಇಲ್ಲವೇ? ಮದುವೆ ಆಗುತ್ತಾ? ಜೀವನದಲ್ಲಿ ಸೆಟಲ್​ ಆಗ್ತೀನಾ? ಎಂಬಿತ್ಯಾದಿ ವಿಚಾರಗಳನ್ನು ತಿಳಿದುಕೊಳ್ಳುವ ಆಸಕ್ತಿಯನ್ನು ಜನರು ತೋರಿಸುತ್ತಾರೆ. ಆದರೆ, ಕೆಲವರಿಗೆ ಈ ಜ್ಯೋತಿಷ್ಯದ ಮೇಲೆ ನಂಬಿಕೆ ಇರುವುದಿಲ್ಲ. ಆದರೂ ಬಹುತೇಕ ಮಂದಿ ಜಾತಕವನ್ನು ನಂಬುತ್ತಾರೆ. ಈ ಕಾರಣಕ್ಕೆ ಜ್ಯೋತಿಷಿಗಳಿಗೆ ತುಂಬಾ ಬೇಡಿಕೆ ಇದೆ.

ಅಂದಹಾಗೆ ನಮ್ಮ ಗ್ರಹಗತಿ ಆಧಾರದ ಮೇಲೆ ನಮ್ಮ ಜೀವನದ ಆಗು-ಹೋಗುಗಳನ್ನು ತಿಳಿದುಕೊಳ್ಳುವ ನಿಟ್ಟಿನಲ್ಲಿ ಜ್ಯೋತಿಷ್ಯ ಶಾಸ್ತ್ರ ಬಹಳ ಮುಖ್ಯವಾಗಿದೆ. ಜ್ಯೋತಿಷ್ಯದಲ್ಲಿ ಹಲವು ವಿಧಾನಗಳಿರುವುದು ನಿಮಗೆಲ್ಲರಿಗೂ ಗೊತ್ತೇ ಇದೆ. ಅದರಲ್ಲಿ ಹಸ್ತ ಸಾಮುದ್ರಿಕಾ ಕೂಡ ಒಂದು. ಹಸ್ತ ಸಾಮುದ್ರಿಕ ಎಂದರೆ ಹಸ್ತದ ಮೇಲಿನ ರೇಖೆಗಳ ಆಧಾರದ ಮೇಲೆ ಭವಿಷ್ಯವನ್ನು ಊಹಿಸುವುದು. ಈ ಹಸ್ತಸಾಮುದ್ರಿಕ ಶಾಸ್ತ್ರವನ್ನು ನಂಬುವ ಅನೇಕ ಜನರಿದ್ದಾರೆ. ಅವರಲ್ಲಿ ಸಾಮಾನ್ಯ ನಾಗರಿಕರಷ್ಟೇ ಅಲ್ಲ ಸೆಲೆಬ್ರಿಟಿಗಳು ಕೂಡ ಇದ್ದಾರೆ.

ನಮ್ಮ ಅಂಗೈನಲ್ಲಿ ವಿವಿಧ ರೀತಿಯ ರೇಖೆಗಳು ಅಥವಾ ಗೀರುಗಳಿವೆ. ಈ ಗೆರೆಗಳಿಂದಾಗಿ ಕೆಲವೊಂದು ಚಿಹ್ನೆಗಳು ಕೂಡ ರಚನೆಯಾಗಿವೆ. ಒಬ್ಬೊಬ್ಬರಲ್ಲೂ ಒಂದೊಂದು ರೀತಿಯ ಚಿಹ್ನೆಗಳಿರುತ್ತವೆ. ಕೆಲವರಲ್ಲಿ ಆಂಗ್ಲ ಅಕ್ಷರ V ಆಕಾರವೂ ಕೂಡ ಇರುತ್ತದೆ. ಅಂಗೈನಲ್ಲಿ V ಚಿಹ್ನೆ ಹೊಂದಿರುವುದರ ಅರ್ಥ ಏನೆಂದು ನಾವೀಗ ತಿಳಿದುಕೊಳ್ಳೋಣ.

* ನಿಮ್ಮ ಅಂಗೈಯಲ್ಲಿರುವ V ಚಿಹ್ನೆಯು ಅದೃಷ್ಟ, ಖ್ಯಾತಿ ಮತ್ತು ಸಮೃದ್ಧಿಯನ್ನು ಸೂಚಿಸುತ್ತದೆ. ಅಲ್ಲದೆ, ವ್ಯಕ್ತಿಯು ತನ್ನ ಜೀವನದಲ್ಲಿ ಪೂರ್ಣಗೊಳಿಸದ ಕಾರ್ಯ ಅಥವಾ ಕರ್ತವ್ಯವನ್ನು ಹೊಂದಿದ್ದಾನೆ ಎಂಬುದನ್ನೂ ಸೂಚಿಸುತ್ತದೆ.

* ಅಂಗೈಯಲ್ಲಿ V ಚಿಹ್ನೆಯನ್ನು ಹೊಂದಿರುವ ಜನರು ನಂಬಲರ್ಹರು ಎಂದು ಹೇಳಲಾಗುತ್ತದೆ.

* V ಚಿಹ್ನೆ ಹೊಂದಿರುವ ಜನರು ಒಳ್ಳೆಯ ಸಮಯ ಮತ್ತು ಕೆಟ್ಟ ಸಮಯದಲ್ಲಿ ಅವರನ್ನು ಬೆಂಬಲಿಸುವ ಉತ್ತಮ ಸ್ನೇಹಿತರನ್ನು ಹೊಂದಿದ್ದಾರೆಂದು ಹೇಳಲಾಗುತ್ತದೆ.

* V ಅಂದರೆ, ವಿಜಯದ ಸಂಕೇತವಾಗಿದ್ದು, ಸಮಾಜದಲ್ಲಿ ಖ್ಯಾತಿ ಮತ್ತು ಉನ್ನತ ಸ್ಥಾನವನ್ನು ಆನಂದಿಸುತ್ತಾರಂತೆ.

* ಅಂಗೈಯಲ್ಲಿ V ಚಿಹ್ನೆಯನ್ನು ಹೊಂದಿರುವ ಜನರು ಬಾಲ್ಯದಲ್ಲೇ ಕಷ್ಟಕರ ಅನುಭವಗಳನ್ನು ಎದುರಿಸುತ್ತಾರೆ. ಆದರೆ, ಅವರ ಸುವರ್ಣಯುಗವು 35 ವರ್ಷಗಳ ನಂತರ ಪ್ರಾರಂಭವಾಗುತ್ತದೆಯಂತೆ.

* ತಮ್ಮ ಅಂಗೈಯಲ್ಲಿ V ಚಿಹ್ನೆಯನ್ನು ಹೊಂದಿರುವ ಜನರು ಅದೃಷ್ಟವಂತರು ಮತ್ತು ಎಲ್ಲ ಚಟುವಟಿಕೆಗಳಲ್ಲಿ ಯಶಸ್ವಿಯಾಗುತ್ತಾರೆ ಎಂದು ಹೇಳಲಾಗುತ್ತದೆ.

* V ಚಿಹ್ನೆಯನ್ನು ಹೊಂದಿರುವ ಜನರು ಎಂದಿಗೂ ಆರ್ಥಿಕ ಸಮಸ್ಯೆಗಳನ್ನು ಹೊಂದಿರುವುದಿಲ್ಲ ಎಂದು ಹೇಳಲಾಗುತ್ತದೆ.

ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು, ಜ್ಯೋತಿಷಿಗಳು, ಪಂಚಾಂಗಗಳು, ನಂಬಿಕೆಗಳು ಹಾಗೂ ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದನ್ನು ವಿಜಯವಾಣಿ ವೆಬ್​ಸೈಟ್​ ಜವಾಬ್ದಾರರಾಗಿರುವುದಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net