ಸಹಜ ಹೆರಿಗೆ ನಂತರ ನಿಲ್ಲದ ರಕ್ತಸ್ರಾವ, ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು‌?

women pic
Published on

ದೊಡ್ಡಬಳ್ಳಾಪುರ: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿರುವುದಾಗಿ ‌ ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆ ಎದುರು ಧರಣಿ ನಡೆಸಿದ ಘಟನೆ ನಡೆದಿದೆ.

ದೊಡ್ಡಬಳ್ಳಾಪುರ ತಾಲೂಕಿನ ಬೈರಾಪುರ ಗ್ರಾಮದ ಸವಿತಾ (22) ಮೃತ ಬಾಣಂತಿ. ಇಂದು ಬೆಳಗ್ಗೆ 9 ಗಂಟೆಗೆ ಸವಿತಾರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅರ್ಚನ ಎಂಬ ವೈದ್ಯರು, ಸವಿತಾಗೆ ಸಹಜ ಹೆರಿಗೆ ಮಾಡಿಸಿದ್ದಾರೆ. ಆದರೆ ಹೆರಿಗೆ ನಂತರ ರಕ್ತ ಸ್ರಾವ ಹೆಚ್ಚಾಗುತ್ತಿದ್ದಂತೆ ಬೇರೆ ಕಡೆ ರಕ್ತ ತರುವಂತೆ ಸೂಚಿಸಿದ್ದಾರೆ.

ಬೇರೆ ಕಡೆಯಿಂದ ರಕ್ತ ತಂದ ನಂತರ ಬೇರೆ ಆಸ್ಪತ್ರೆಗೆ ಕರೆದೊಯ್ಯುವಂತೆ ಹೇಳಿದ್ದಾರೆ. ಅಲ್ಲದೇ ಮಧ್ಯಾಹ್ನ 2 ಗಂಟೆಯ ನಂತರ ಮಗು ಮತ್ತು ತಾಯಿಯನ್ನು ಆಸ್ಪತ್ರೆಯಿಂದ ಹೊರಗೆ ಕಳಿಸಿದ್ದಾರೆ. ಹೆರಿಗೆ ನಂತರ ತಾಯಿ-ಮಗು ಚೆನ್ನಾಗಿದ್ದಾರೆ ಎಂದು ತಿಳಿಸಿದ್ದ ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ ಸಾವನ್ನಪ್ಪಿದ್ದಾರೆಂದು ಆರೋಪಿಸಿ, ರೊಚ್ಚಿಗೆದ್ದ ಮೃತಳ‌ ಕುಟುಂಬಸ್ಥರು ಆಸ್ಪತ್ರೆ ಎದುರು ಧರಣಿ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net