ಸಂಪುಟ ಪುನಾರಚನೆ ಆಗುತ್ತಾ? ನಾಯಕತ್ವ ಬದಲಾವಣೆ ಇದೆಯಾ?: ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ಏನು?

vidhana soudha 1
Published on

ಬೆಂಗಳೂರು: ರಾಜ್ಯದಲ್ಲಿ ಕರೊನಾ ಹಾವಳಿ ನಡುವೆಯೇ ರಾಜಕೀಯ ವಿಚಾರವೂ ಗರಿಗೆದರಿದ್ದು, ಸಂಪುಟ ಪುನಾರಚನೆ ಮತ್ತು ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ತುಂಬಾ ಮಾತುಗಳು ಕೇಳಿ ಬರುತ್ತಿವೆ. ಇವೆಲ್ಲದಕ್ಕೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಸ್ಪಷ್ಟನೆ ನೀಡಿದ್ದಾರೆ.

ಸಂಪುಟ ಪುನಾರಚನೆ, ನಾಯಕತ್ವ ಬದಲಾವಣೆ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಿಎಂ, ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆ ಎರಡೂ ಊಹಾಪೋಹ ಎಂಬ ಸ್ಪಷ್ಟನೆ ನೀಡಿದ್ದಾರೆ. ಮಾತ್ರವಲ್ಲ, ಆ ಥರದ ಯಾವುದೇ ವಿಚಾರಗಳು ನಮ್ಮ ಕಣ್ಮುಂದೆ ಇಲ್ಲ. ಕೇಂದ್ರ ಸರ್ಕಾರ ಕೂಡ ಆ ಬಗ್ಗೆ ಯಾವುದೇ ಸೂಚನೆ ಕೊಟ್ಟಿಲ್ಲ. ಮುಂದೆ ಕೇಂದ್ರ ಸರ್ಕಾರ ಸೂಚನೆ ಕೊಟ್ಟಂತೆ ನಡೆದುಕೊಳ್ಳುತ್ತೇವೆ ಎನ್ನುವ ಮೂಲಕ ಅವರು ಸದ್ಯಕ್ಕೆ ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆ ಇಲ್ಲ ಎಂಬುದನ್ನು ಸ್ಷಷ್ಟಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net