ಇಂಗ್ಲಿಷ್ ಆವೃತ್ತಿಯಲ್ಲಿ ರಿಲೀಸ್​ ಆಗಲಿದೆ ಪ್ರಭಾಸ್​​ ನಟನೆಯ ಸಲಾರ್​?

Untitled design - 2023-08-03T154732.656
Published on

ಮುಂಬೈ: ಟಾಲಿವುಡ್​ನ ರೆಬಲ್​ ಸ್ಟಾರ್, ಡಾರ್ಲಿಂಗ್​ ಪ್ರಭಾಸ್​ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ 'ಸಲಾರ್' ಬಿಡುಗಡೆಗೂ ಮುನ್ನವೇ ಸಿನಿಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದ್ದು, ಪ್ರಭಾಸ್​-ಪ್ರಶಾಂತ್​ ನೀಲ್​ ಕಾಂಬಿನೇಷನ್​ ತೆರೆಯ ಮೇಲೆ ಹೇಗೆ ಮೋಡಿ ಮಾಡಲಿದೆ ಎಂಬುದನ್ನು ತಿಳಿಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಸದ್ಯ ಇದೀಗ ಪ್ಯಾನ್​ ಇಂಡಿಯಾ ಸಲಾರ್​ ಚಿತ್ರವು ಕನ್ನಡ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ರಿಲೀಸ್​ ಆಗಲು ಸಜ್ಜಾಗಿದೆ. ಈ ಮಧ್ಯೆ ಸಿನಿಮಾ ಆಂಗ್ಲ ಭಾಷೆಯಲ್ಲೂ ಕೂಡ ರಿಲೀಸ್​ ಆಗಲಿದೆ ಎಂಬ ವದಂತಿಗಳು ಕೇಳಿಬಂದಿದ್ದು, ಚಿತ್ರದ ನಿರ್ಮಾಪಕರು ಇಂಗ್ಲಿಷ್ ಆವೃತ್ತಿಯನ್ನು ಬಿಡುಗಡೆ ಮಾಡಲು ಯೋಜಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಸೆಪ್ಟೆಂಬರ್ 28, 2023 ರಂದು ವಿಶ್ವದಾದ್ಯಂತ ಬಹುತೇಕ ಚಿತ್ರಮಂದಿರಗಳಲ್ಲಿ ಸಲಾರ್​  ಚಿತ್ರವನ್ನು ಬಿಡುಗಡೆಗೊಳಿಸಲಿರುವ ಚಿತ್ರತಂಡ, ಇಂಗ್ಲಿಷ್ ಆವೃತ್ತಿಯನ್ನು ಅಕ್ಟೋಬರ್ 13, 2023 ರಂದು ರಿಲೀಸ್​ ಮಾಡಲಿದೆ ಎಂದು ಹೇಳಲಾಗಿದೆ. ಸದ್ಯ ಈ ಕುರಿತು ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಪ್ರಕಟವಾಗಿಲ್ಲ. ಚಿತ್ರದಲ್ಲಿ ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಈಶ್ವರಿ ರಾವ್ ಸೇರಿದಂತೆ ಮುಂತಾದ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net