ಶ್ವಾನಕ್ಕೆ ಹಿಗ್ಗಾಮುಗ್ಗ ಥಳಿಸಿದ..ಇವನು ಮನುಷ್ಯನಾ? ಈ ವಿಡಿಯೋ ನೋಡಿದ್ರೆರೆ ನಿಮಗೂ ಕೋಪ ಬರುತ್ತೆ…

viralNews
Published on

ಉತ್ತರಪ್ರದೇಶ: ವ್ಯಕ್ತಿಯೊಬ್ಬ ನಾಯಿಯೊಂದಕ್ಕೆ ಅಮಾನುಷವಾಗಿ ಹಲ್ಲೆ ಮಾಡಿ ವರ್ತಿಸಿದ್ದಾನೆ. ನಾಯಿಯ ಕಾಲುಗಳನ್ನು ಹಿಡಿದು ರಸ್ತೆಗೆ ಹೊಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೀಡಿಯೋ ನೋಡಿದ ನೆಟ್ಟಿಗರು ಆ ವ್ಯಕ್ತಿಯ ಮೇಲೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶ ರಾಜ್ಯದ ಬರೌತ್ ಕೊತ್ವಾಲಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವಿಡಿಯೋ ಪ್ರಕಾರ , ವ್ಯಕ್ತಿಯೊಬ್ಬ ಬೀದಿ ನಾಯಿಯ ಕಾಲನ್ನು ಹಿಡಿದು ರಸ್ತೆ ಮೇಲೆ ಹೊಡೆಯುತ್ತಿರುವುದು ಕಂಡುಬಂದಿದೆ.

ನಾಯಿಯ ಎರಡು ಹಿಂಗಾಲುಗಳನ್ನು ಹಿಡಿದು ತಿರುಗಿಸಿ ಹೊಡೆದನು. ನಾಯಿಗಳ ಜತೆ ಕ್ರೂರವಾಗಿ ವರ್ತಿಸುತ್ತಿದ್ದರಿಂದ ಸುತ್ತಮುತ್ತ ನಾಲ್ಕೈದು ನಾಯಿಗಳು ಬೊಗಳಿ ನಿಯಂತ್ರಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. 'ನಾಯಿ ಬಿಡು... ಸಾಯುತ್ತೆದೆ' ಎಂದು ಸುತ್ತಮುತ್ತಲಿನವರು ಕೂಗಿಕೊಂಡರೂ ಕೇಳಲಿಲ್ಲ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಆ ವ್ಯಕ್ತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸುತ್ತಲಿನ ಜನ ನಾಯಿಗೆ ಕ್ರೌರ್ಯ ಎಸಗುತ್ತಿದ್ದರೂ ತಡೆಯಲು ಮುಂದಾಗಿಲ್ಲ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲ ನೆಟ್ಟಿಗರು ನಾಯಿಯ ಜತೆ ಕ್ರೂರವಾಗಿ ವರ್ತಿಸಿದ ವ್ಯಕ್ತಿಯನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಆದರೆ, ಈ ಘಟನೆ ಕುರಿತು ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಾಯಿಯನ್ನು ಕ್ರೂರವಾಗಿ ನಡೆಸಿಕೊಂಡ ವ್ಯಕ್ತಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net