ಹಿಟ್ ಅಂಡ್ ರನ್ ನಾಯಕ ಆಗೋದು ಬೇಡ: ಸಂಸದ ಬಿ.ವೈ.ರಾಘವೇಂದ್ರ ಆರೋಪಕ್ಕೆ ಕೌಂಟರ್​ ಕೊಟ್ಟ DK

Bbau (41)
Published on

ಬೆಂಗಳೂರು: ಸಂಸದ ರಾಘವೇಂದ್ರ ಅವರು ಹಿಟ್ ಅಂಡ್ ರನ್ ನಾಯಕರ ಪಟ್ಟಿಗೆ ಸೇರುವುದು ಬೇಡ" ಎಂದು ಡಿಸಿಎಂ DK ಶಿವಕುಮಾರ್ ಹೇಳಿದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಬಿಹಾರ ಚುನಾವಣೆಗೆ ಕರ್ನಾಟಕದಿಂದ ಹಣ ಹೋಗುತ್ತಿದೆ. ಇದಕ್ಕಾಗಿ ಅಧಿಕಾರಿಗಳಿಗೆ ಕಿರುಕುಳ ಹೆಚ್ಚಾಗಿದೆ ಎನ್ನುವ ಸಂಸದ ಬಿ.ವೈ.ರಾಘವೇಂದ್ರ ಅವರ ಆರೋಪದ ಬಗ್ಗೆ ಮಾತನಾಡಿದ ಡಿಸಿಎಂ, ''ಅವರ ಬಳಿ ದಾಖಲೆಗಳಿದ್ದರೆ ಅದನ್ನು ಬಿಡುಗಡೆ ಮಾಡಿ ಆರೋಪ ಮಾಡಲಿ. ಹಿಟ್ ಅಂಡ್ ರನ್ ಮಾಡುವ ಒಂದಷ್ಟು ನಾಯಕರಿದ್ದಾರಲ್ಲಾ ಅವರಂತೆ ರಾಘವೇಂದ್ರ ಅವರು ಆಗುವುದು ಬೇಡ. ರಾಘವೇಂದ್ರ ಅವರ ಹೆಸರು ಸುಳ್ಳಿಗೆ ಮತ್ತೊಂದು‌ ಉದಾಹರಣೆಯಂತಾಗುವುದು ಬೇಡ" ಎಂದು ತಿರುಗೇಟು ನೀಡಿದರು.

ಜಾಗರೂಕತೆಯಿಂದ ಪಟಾಕಿ ಸಿಡಿಸಿ

"ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು. ಆದಷ್ಟು ಜಾಗರೂಕತೆಯಿಂದ ಪಟಾಕಿ ಸಿಡಿಸಬೇಕು. ಹಸಿರು ಪಟಾಕಿಯನ್ನು ಮಾತ್ರ ಬಳಸಬೇಕು. ಈಗಾಗಲೇ ಸಣ್ಣಪುಟ್ಟ ಅವಘಡಗಳ ಸುದ್ದಿ ಕೇಳಿಬರುತ್ತಿದೆ. ಯಾವುದೇ‌ ಸಿಡಿಮದ್ದುಗಳನ್ನು ಸಿಡಿಸುವ ಸಂದರ್ಭದಲ್ಲಿಯೂ ಎಚ್ಚರವಿರಲಿ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net