ಕೇಸ್ ವಾಪಸ್ ಗಾಗಿ ಅರ್ಜಿ ಹಾಕಿ ಭಿಕ್ಷೆ ಬೇಡಿಲ್ಲ: ಸಿ.ಟಿ.ರವಿ ವಾಗ್ದಾಳಿ

12 ckm 1 c.t.ravi
ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿದರು.
Published on

ಬೆಂಗಳೂರು: ನಾನು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿಲ್ಲ, ಕಲ್ಲು ಹೊಡೆದಿಲ್ಲ. ಕೋಲಾರ, ಚಿಕ್ಕಬಳ್ಳಾಪುರದಲ್ಲಿ ನನ್ನ ವಿರುದ್ಧ ಕೇಸ್ ದಾಖಲಾಗಿಲ್ಲ. ಕೇಸ್ ವಾಪಸ್ ಗಾಗಿ ಅರ್ಜಿ ಹಾಕಿ ಸರ್ಕಾರಕ್ಕೆ ಭಿಕ್ಷೆ ಬೇಡಿಲ್ಲವೆಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಾಗ್ದಾಳಿ ಮಾಡಿದರು‌.

ಗಲಭೆಕೋರರ ವಿರುದ್ಧ ಕ್ರಿಮಿನಲ್ ಕೇಸ್ ವಾಪಸ್ ಗೆ ಸರ್ಕಾರ ನಿರ್ಧರಿಸಿದ್ದನ್ನು ಖಂಡಿಸಿ, ಸ್ವಾತಂತ್ರ್ಯ ಉದ್ಯಾನವನದಲ್ಲಿ ಬಿಜೆಪಿ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನ್ನ ಮೇಲಿನ ಕೇಸ್ ವಾಪಸ್ ತಗೊಂಡಿದ್ದೇವೆ ಎಂದು ರಾಜ್ಯ ಸರ್ಕಾರ ಹೇಳಿದೆ.

ಆದರೆ ಯಾವ ಕೇಸ್ ವಾಪಾಸ್ ಪಡೆರಿ ಅಂತ ನಾನು ಅರ್ಜಿ ಹಾಕಿದ್ದೇನೆ. ಯಾವ ಕೇಸ್ ಎಂಬ ಬಗ್ಗೆ ಸರ್ಕಾರ ವಿವರಣೆ ನೀಡಬೇಕು. ಸುಳ್ಳು ಹೇಳಿ ಜನರ ದಾರಿ ತಪ್ಪಿಸುವ ಕೆಲಸ ಮಾಡಬಾರದು. ಕೇಸ್ ವಾಪಸ್ ತೆಗೆದುಕೊಂಡಿದ್ದು ನಿಜವೇ ಆಗಿದ್ದಲ್ಲಿ ಕೇಸ್ ಬಗ್ಗೆ ಸ್ಪಷ್ಟಪಡಿಸಿ ಸಾಬೀತುಪಡಿಸಬೇಕು ಎಂದು ಆಗ್ರಹಿಸಿದರು.

ಎಲ್ಲ ಸ್ತರದಲ್ಲೂ ಹೋರಾಟ

ರಾಜ್ಯಪಾಲರಿಗೆ ದೂರು ಸಲ್ಲಿಸಿದ ಬಿಜೆಪಿ ನಿಯೋಗದಲ್ಲಿದ್ದ ಸಿ.ಟಿ.ರವಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಕೋರ್ಟಿನಲ್ಲಿ ಮಾತ್ರವಲ್ಲದೆ, ಜನತಾ ನ್ಯಾಯಾಲಯದಲ್ಲೂ ಬಿಜೆಪಿ ಹೋರಾಟ ಮಾಡಲಿದೆ. ಕೇಸ್ ವಾಪಸ್ ಪಡೆಯುವಾಗ ನೀವು ಕೋಮುವಾದಿ ಎಂದು ತೋರಿಸಿದ್ದೀರಿ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಟೀಕಿಸಿದರು.

ಹಿಜಾಬ್ ವಿರುದ್ಧ ಹೋರಾಟ ಮಾಡಿದವರ ಕೇಸ್ ವಾಪಸ್ ಪಡೆದಿಲ್ಲ; ಆದರೆ, ಹಿಜಾಬ್ ಪರವಾಗಿ ಹೋರಾಟ ಮಾಡಿದವರ ಕೇಸ್ ವಾಪಸ್ ಪಡೆಯುತ್ತಾರೆ. ವಿದ್ಯಾರ್ಥಿಗಳಲ್ಲೂ ಭೇದಭಾವ ಮಾಡಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಲ್ಲಿ ಟೋಪಿ ಹಾಕುವವ ಯಾರು, ಕುಂಕುಮ ಇಡುವವರು ಯಾರೆಂದು ಭೇದಭಾವ ಮಾಡಿದ್ದೀರಿ ಎಂದು ಸಿ.ಟಿ.ರವಿ ಖಂಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net