ರಾಹುಲ್ ಅರೆಸ್ಟ್ ಮಾಡುವ ಧೈರ್ಯವಿದೆಯಾ?: ಬಿಜೆಪಿಗೆ ಕಾಂಗ್ರೆಸ್ ನಾಯಕ ಸವಾಲು

Abhishek Manu Singhvi
Published on

ನವದೆಹಲಿ: ಇಡಿ ರಾಹುಲ್ ಗಾಂಧಿ ಅವರನ್ನು ಗುರಿಯಾಗಿಸಿದೆ ಎಂದು ಕಾಂಗ್ರೆಸ್​ನ ನಾಯಕರು ಆರೋಪಿಸುತ್ತಿರುವಾಗಲೇ ಕಾಂಗ್ರೆಸ್​ನ ಹಿರಿಯ ನಾಯಕರೊಬ್ಬರು ಬಿಜೆಪಿಗೆ ಸವಾಲು ಹಾಕಿದ್ದಾರೆ.

ರಾಹುಲ್ ಅವರನ್ನು ಬಂಧಿಸುವ ಧೈರ್ಯ ಬಿಜೆಪಿಗೆ ಇದೆಯೇ ಎಂದು ಸವಾಲು ಪಕ್ಷದ ಹಿರಿಯ ನಾಯಕ ಅಭಿಷೇಕ್ ಮನು ಸಿಂಘ್ವಿ ಭಾನುವಾರ ದೆಹಲಿಯಲ್ಲಿ ಪ್ರಶ್ನಿಸಿದ್ದಾರೆ.

ರಾಹುಲ್​ ಗಾಂಧಿ ಬಂಧನ ಬಿಜೆಪಿಯ ಶವಪೆಟ್ಟಿಗೆಗೆ ಕೊನೆಯ ಮೊಳೆಯಾಗುತ್ತದೆ. ಸಂಸತ್ತಿನಲ್ಲಿ ಚಕ್ರವ್ಯೂಹ ಭಾಷಣ ಮಾಡಿದ ನಂತರ ತನಿಖಾ ಸಂಸ್ಥೆಗಳು ರಾಹುಲ್ ಮೇಲೆ ಬೇಹುಗಾರಿಕೆ ನಡೆಸಿವೆ ಎಂದು ಆರೋಪಿಸಿದರು.

ಲೋಕಸಭೆಯಲ್ಲಿ ಅವರು ‘ಚಕ್ರವ್ಯೂಹ’ ಭಾಷಣ ಮಾಡಿದ್ದು ಕೇಂದ್ರ ಸರ್ಕಾರದ ನಾಯಕರಿಗೆ ಇಷ್ಟವಾಗಲಿಲ್ಲ. ಆ ಭಾಷಣದ ಹಿನ್ನೆಲೆಯಲ್ಲಿ ಶೀಘ್ರವೇ ಅವರ ಮೇಲೆ ಇಡಿ ದಾಳಿಗೆ ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದರು.

ಆ ಇಬ್ಬರಲ್ಲಿ ಒಬ್ಬರಿಗೆ ತಮ್ಮ ಚಕ್ರವ್ಯೂಹದ ಭಾಷಣ ಇಷ್ಟವಾಗಲಿಲ್ಲ ಮತ್ತು ಅದಕ್ಕಾಗಿಯೇ ಅವರು ತಮ್ಮ ಮೇಲೆ ದಾಳಿ ಮಾಡಲು ತಯಾರಿ ನಡೆಸುತ್ತಿದ್ದಾರೆ ಎಂದು ರಾಹುಲ್ ಹೇಳಿಕೊಂಡಿದ್ದಾರೆ. ಈ ದಾಳಿಗಳಿಗಾಗಿ ಕಾಯಲಾಗುತ್ತಿದೆ. ಚಾಯ್ ಮತ್ತು ಬಿಸ್ಕತ್‌ಗಳನ್ನು ರೆಡಿ ಮಾಡಿ ಎಂದು ರಾಹುಲ್ ಗಾಂಧಿ ಶುಕ್ರವಾರ ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ಇಡಿ ನಿರ್ದೇಶನಾಲಯದ ಖಾತೆಗೆ ಟ್ಯಾಗ್ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net