ಮಕ್ಕಳನ್ನು ಅಂಕಗಳಿಗೆ ಸಿಮೀತಗೊಳಿಸದಿರಿ

klr sport
ಕೋಲಾರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಶುಕ್ರವಾರ ಪ್ರಾರಂಭವಾದ ರಾಜ್ಯಮಟ್ಟದ ಅಥ್ಲೇಟಿಕ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಿಂದ ಗಣ್ಯರು ಕ್ರೀಡಾ ಜ್ಯೋತಿ ಸ್ವೀಕರಿಸಿದರು. ಬಸವರಾಜ ಹೊರಟ್ಟಿ, ಅಕ್ರಂಪಾಷ, ಬಿ.ನಿಖಿಲ್, ಆರ್.ಗೀತಾ ಇದ್ದರು.
Published on

ಕೋಲಾರ: ಇತ್ತೀಚಿನ ದಿನಗಳಲ್ಲಿ ಪಾಲಕರು ಮಕ್ಕಳನ್ನು ಅಂಕಗಳಿಸುವ ಯಂತ್ರಗಳನ್ನಾಗಿ ಮಾಡುತ್ತಿದ್ದಾರೆ ಹೊರತು ಪಠ್ಯೇತರ ಚಟುವಟಿಕೆಗಳಿಗೆ ಅವಕಾಶ ನೀಡದಿರುವುದು ಬೇಸರದ ಸಂಗತಿ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಳವಳ ವ್ಯಕ್ತಪಡಿಸಿದರು.

ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ರೀಡಾ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 17 ವರ್ಷದೊಳಗಿನ ರಾಜ್ಯಮಟ್ಟದ ಅಥ್ಲೇಟಿಕ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಕ್ರೀಡಾ ಸಂಬAಽ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ ಬಾಲ್ಯದ ನೆನಪುಗಳು ಬರುತ್ತವೆ. ಜಿಲ್ಲೆಯಲ್ಲಿ ಉತ್ತಮ ಕ್ರೀಡಾಕೂಟ ಆಯೋಜಿಸಲಾಗಿದೆ. ನಾನೂ ಸಹ ಕ್ರೀಡಾ ಶಿಕ್ಷಕನಾಗಿ ಮಕ್ಕಳಿಗೆ ಕ್ರೀಡೆಗಳ ತರಬೇತಿ ನೀಡಿ ರಾಜ್ಯ, ದೇಶ, ಅಂತಾರಾಷ್ಟಿçÃಯ ಕ್ರೀಡಾಪಟುಗಳನ್ನು ತಯಾರು ಮಾಡಿದ್ದು, ಉತ್ತಮ ಪ್ರದರ್ಶನ ನೀಡಿದ್ದಾರೆ ಎಂದು ಸ್ಮರಿಸಿದರು.

ಮನುಷ್ಯನಿಗೆ ಜೀವನದಲ್ಲಿ ಶಿಸ್ತು ಮುಖ್ಯ, ಅದನ್ನು ರಾಜ್ಯದ ಕ್ರೀಡಾ ವಿದ್ಯಾರ್ಥಿಗಳಲ್ಲಿ ಕಂಡುಕೊAಡಿದ್ದೇನೆ. ಕ್ರೀಡೆಯಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕು. ಎಲ್ಲರೂ ಪ್ರಥಮ ಸ್ಥಾನ ಪಡೆದುಕೊಳ್ಳಲಾಗುವುದಿಲ್ಲ. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು, ತೀರ್ಪುಗಾರರು ನೀಡುವ ಅಂತಿಮ ತೀರ್ಮಾನಕ್ಕೆ ಬದ್ಧರಾಗಿರಬೇಕು ಎಂದು ಕಿವಿಮಾತು ಹೇಳಿದರು.

ಮಕ್ಕಳಿಗೆ ಪಠ್ಯದ ಜತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಪಾಲಕರು ಅವಕಾಶ ನೀಡಬೇಕು. ಇದರಿಂದಾಗಿ ಮಕ್ಕಳಲ್ಲಿನ ಪ್ರತಿಭೆ ಅನಾವರಣಗೊಳಿಸಲು ವೇದಿಕೆ ಕಲ್ಪಿಸಿದಂತಾಗುತ್ತದೆ. ಕ್ರೀಡೆಯಲ್ಲಿ ಭಾಗವಹಿಸಿ ಪ್ರದರ್ಶನ ನೀಡುವುದು ತುಂಬಾ ಮುಖ್ಯ, ಮುಂದಿನ ದಿನಗಳಲ್ಲಿ ಮಕ್ಕಳು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು, ಶ್ರೇಷ್ಠ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.

ಪ್ರತಿಯೊಬ್ಬರೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು, ಕ್ರೀಡೆಯಲ್ಲಿ ಎಲ್ಲರೂ ಭಾಗವಹಿಸುವ ಅವಕಾಶವಿದ್ದು ಉತ್ತಮ ಪ್ರದರ್ಶನ ನೀಡಿ ಜಿಲ್ಲೆಯ ಕೀರ್ತಿ ಹೆಚ್ಚಿಸಬೇಕು ಎಂದರು.

* ವಿಚಲಿತರಾಗದೆ ಅಭ್ಯಾಸ ಮುಂದುವರಿಸಿ

ರಾಜ್ಯಮಟ್ಟದ 17 ವರ್ಷದೊಳಿಗಿನ ಬಾಲಕ/ಬಾಲಕಿಯರ ಅಥ್ಲೆಟಿಕ್ ಕ್ರೀಡಾಕೂಟ ಜಿಲ್ಲೆಯಲ್ಲಿ ಏರ್ಪಡಿಸಿರುವುದು ಹೆಮ್ಮೆಯ ವಿಷಯ. ವಿದ್ಯಾರ್ಥಿಗಳು ಕ್ರೀಡಾಸೂರ್ತಿಯಿಂದ ಪಾಲ್ಗೊಳ್ಳಿ, ಕ್ರೀಡೆಯಲ್ಲಿ ಎಲ್ಲರೂ ಭಾಗವಹಿಸಲು ಅವಕಾಶವಿದೆ, ಗೆಲುವು ಒಬ್ಬರಿಗೆ ಸಿಕ್ಕರೂ ಅದರಿಂದ ವಿಚಲಿತರಾಗದೇ ಉಳಿದವರು ಅಭ್ಯಾಸ ಮುಂದುವರಿಸಿ ಎಂದು ಜಿಲ್ಲಾಧಿಕಾರಿ ಅಕ್ರಂಪಾಷಾ ಮಾತನಾಡಿ ತಿಳಿಸಿದರು. ಜಿಲ್ಲೆಯಪರ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳು ಹಾಗೂ 2 ಕ್ರೀಡಾ ವಸತಿ ಶಾಲೆಗಳ ಒಟ್ಟು 27 ತಂಡಗಳು ಭಾಗವಹಿಸಿವೆ. ರಾಜ್ಯಾದ್ಯಂತ 3250 ಮಕ್ಕಳು, ತೀರ್ಪುಗಾರರು, ಶಿಕ್ಷಕರು ಬಂದಿದ್ದು, ಯಾವುದೇ ಸಮಸ್ಯೆ ಎದುರಾಗದಂತೆ ಎಲ್ಲ ಸೌಲಭ್ಯಗಳನ್ನು ಒದಗಿಸಿದ್ದೇವೆ.ಕ್ರೀಡಾಕೂಟ ಯಶಸ್ವಿಯಾದ ನಂತರ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಎಂದು ಕರೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಅವರು ಅಂತಾರಾಷ್ಟಿçÃಯ ಕ್ರೀಡಾಪಟುಗಳಾದ ನಂದನ್, ಸಾಯಿ ಸೃಜನ್ ತಂದ ಕ್ರೀಡಾಜ್ಯೋತಿ ಸ್ವೀಕರಿಸಿದರು. ಚಿನ್ಮಯಿ ಶಾಲೆಯ ಮೈತ್ರಿ ಮತ್ತು ತಂಡದವರಿAದ ಕೋಲಾಟ ಹಾಗೂ ಜಾಲಪ್ಪ ಶಾಲೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಲಾಯಿತು.

ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೃಷ್ಣಮೂರ್ತಿ, ಕ್ರೀಡಾ ಹಾಗೂ ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕಿ ಅರ್.ಗೀತಾ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸನ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಕೆ.ಎಸ್.ಚಂದ್ರಶೇಖರ್, ಕನ್ನಡ ಮತ್ತು ಸಂಸ್ಕೃತಿ ಇಲಾಖಖೆ ಸಹಾಯ ನಿರ್ದೇಶಕಿ ವಿಜಯಲಕ್ಷ್ಮೀ, ಸಮಾಜ ಸೇವಕ ರಾಜಣ್ಣ, ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಚೌಡಪ್ಪ, ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘದ ತಾಲೂಕು ಅಧ್ಯಕ್ಷ ಪಾಲ್ಗುಣ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net