ನಟ ದರ್ಶನ್​ಗೆ ಬೇಲ್​ ನೀಡದಂತೆ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲಿಸ್ತೀವಿ: Dr G Parameshwar

Darshan
Published on

ಮೈಸೂರು: ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ಚಿಕಿತ್ಸೆಯ ಸಲುವಾಗಿ ಮಧ್ಯಂತರ ಜಾಮೀನಿನ ಮೇಲೆ ಹೊರಬಂದಿರುವ ನಟ ದರ್ಶನ್​ (Darshan) ಅವರ ಬೇಲ್​ಅನ್ನು ರದ್ದು ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ್ (Dr G Parameshwar)​ ತಿಳಿಸಿದ್ದಾರೆ.

ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಸಚಿವರು, ದರ್ಶನ್ (Darshan) ಅವರು ಚಿಕಿತ್ಸೆ ಪಡೆಯಲೆಂದು ಮಧ್ಯಂತರ ಜಾಮೀನು (Interim Bail) ಪಡೆದು ಹೊರಗೆ ಬಂದಿದ್ದಾರೆ. ಮೂರು ವಾರಗಳ ಕಾಲಾವಕಾಶದಲ್ಲಿ ಚಿಕಿತ್ಸೆ ಪಡೆದು ಮತ್ತೆ ದರ್ಶನ್​ (Darshan) ಜೈಲು ಸೇರಬೇಕಾಗುತ್ತದೆ. ಅದಕ್ಕೂ ಮುನ್ನ ಮತ್ತೆ ದರ್ಶನ್​ ಬೇಲ್ ಕೇಳಬಹುದು, ವಿಚಾರಣೆ ನಡೆಯಬಹುದು.  ನಾವು ಕೂಡ ದರ್ಶನ್​ಗೆ ಬೇಲ್ ಕೊಡಬಾರದು ಅಂತ ಸುಪ್ರೀಂ ಕೋರ್ಟ್​ಗೆ ಅರ್ಜಿ ಹಾಕುತ್ತೇವೆ. ಸುಪ್ರೀಂಗೆ ಮೇಲ್ಮನವಿ ಸಲ್ಲಿಸುವ ಪ್ರಕ್ರಿಯೆ ಕೂಡ ನಡೆದಿದೆ.

ದರ್ಶನ್ ಚಿಕಿತ್ಸೆಗೆಂದು ಮೂರು ತಿಂಗಳು ಜಾಮೀನು ಪಡೆದುಕೊಂಡಿದ್ದಾರೆ. ಜಾಮೀನಿನ ಅವಧಿ ವಿಸ್ತರಿಸುವಂತೆ ಕೇಳಿಕೊಂಡಿರುವುದು ನನಗೆ ಗೊತ್ತಿಲ್ಲ. ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಂದುವರಿದಿದ್ದು, ಹೆಚ್ಚುವರಿ ದೋಷಾರೋಪಪಟ್ಟಿ ಸಲ್ಲಿಸುವ ಬಗ್ಗೆ ಮತ್ತಷ್ಟು ಸಾಕ್ಷ್ಯ ಸಂಗ್ರಹಿಸುವ ಕೆಲಸ ನಡೆಯುತ್ತಿದೆ. ಸಾಕ್ಷ್ಯ ಸಂಗ್ರಹದ ಬಳಿಕ ದೋಷಾರೋಪಪಟ್ಟಿ ಸಲ್ಲಿಸಲಾಗುವುದು ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ್ (Dr G Parameshwar)​ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net