

ಬೆಂಗಳೂರು: ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ಮಧ್ಯಂತರ ಜಾಮೀನಿನ ಮೇಲೆ ಹೊರಬಂದಿರುವ ನಟ ದರ್ಶನ್ (Darshan) ಅವರ ಬೇಲ್ಅನ್ನು ರದ್ದು ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರು ತಯಾರಿ ನಡೆಸಿದ್ದು, ಇದಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳು ನಡೆಯುತ್ತಿದ್ದು, ಗೃಹ ಸಚಿವ ಡಾ.ಜಿ. ಪರಮೇಶ್ವರ್ (DR G Parameshwar) ಅವರು ಅಚ್ಚರಿಯ ಹೇಳಿಕೆ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಗೃಹಸಚಿವ ಪರಮೇಶ್ವರ್ (DR G Parameshwar), ಮಧ್ಯಂತರ ಜಾಮೀನು ತಡೆ ಕೋರಿ ಮೇಲ್ಮನವಿ (Appeal) ಸಲ್ಲಿಕೆಯಲ್ಲಿ ಯಾವುದೇ ವಿಳಂಬ ಆಗಿಲ್ಲ. ಮೇಲ್ಮನವಿ (Appeal) ಯಾವಾಗ ಸಲ್ಲಿಸಬೇಕು ಎಂಬುದನ್ನು ಗೃಹ ಇಲಾಖೆ ಕಾರ್ಯದರ್ಶಿ ತೀರ್ಮಾನಿಸುತ್ತಾರೆ. ಮೇಲ್ಮನವಿ ಸಲ್ಲಿಸುವುದಾದರೆ ಸಲ್ಲಿಸಿ ಎಂದು ನಾನೂ ಸೂಚಿಸಿದ್ದೇನೆ. ಇಂತಹ ಪ್ರಕರಣಗಳಲ್ಲಿ ಪ್ರಕ್ರಿಯೆಗಳನ್ನು ಅನುಸರಿಸಿ ಮುಂದುವರಿಯಬೇಕಾಗುತ್ತದೆ.
ಮೇಲ್ಮನವಿ (Appeal) ಸಲ್ಲಿಕೆ ವಿಚಾರವಾಗಿ ಕಾನೂನು ಇಲಾಖೆಯಿಂದಲೂ ಮಾಹಿತಿ ತೆಗೆದುಕೊಳ್ಳಬೇಕು. ಪೊಲೀಸ್ ಇಲಾಖೆಯಿಂದಲೂ ಕೂಡ ಪ್ರಸ್ತಾವನೆ ಬರಬೇಕು. ನಂತರವೇ ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ (DR G Parameshwar) ಅವರು ಮೇಲ್ಮನವಿ (Appeal) ಸಲ್ಲಿಸುವ ಕುರಿತು ಮಾಹಿತಿ ನೀಡಿದ್ದಾರೆ.
ಸರ್ಕಾರಿ ಟೆಂಡರ್ನಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಕುರಿತು ಪ್ರತಿಕ್ರಿಯಿಸಿ, ಸರ್ಕಾರದ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಚಾರದಲ್ಲಿ ತಪ್ಪು ಗ್ರಹಿಕೆ ಆಗಿದೆ. ಈ ವಿಚಾರವಾಗಿ ಸಿಎಂಗೆ ಕೆಲವು ಶಾಸಕರು, ಮುಖಂಡರು ಮನವಿ ಪತ್ರ ಸಲ್ಲಿಸಿದ್ದರು. ಆ ಪತ್ರ ಪರಿಶೀಲನೆಗೆ ಅಲ್ಪಸಂಖ್ಯಾತ ಇಲಾಖೆಗೆ ಸಿಎಂ ಸೂಚನೆ ನೀಡಿದ್ದರು. ಇಷ್ಟು ಬಿಟ್ಟರೆ ಬೇರೇನೂ ಆಗಿಲ್ಲ. ಏನೇ ತೀರ್ಮಾನ ಆದರೂ ಸಂಪುಟ ಸಭೆಯಲ್ಲಿ ಆಗಬೇಕು. ಪರಿಶೀಲನೆ ಮಾಡಿ ಎಂದು ಹೇಳಿದ ತಕ್ಷಣ ತೀರ್ಮಾನ ಆದಂತೆ ಅಲ್ಲ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ (DR G Parameshwar) ಅವರು ಹೇಳಿದ್ದಾರೆ.