ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ: ಗೃಹ ಸಚಿವ ಪರಮೇಶ್ವರ್

Parameshwar
Published on

ಬೆಂಗಳೂರು: ಹುಬ್ಬಳ್ಳಿ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ-ಪ್ರತಿವಾದಕ್ಕೆ ಆಸ್ಪದ ಮಾಡಿಕೊಟ್ಟಿದ್ದು, ಈ ಕೊಲೆ ಪ್ರೀತಿ ವಿಚಾರಕ್ಕೆ ಆಗಿದೆ ಅಂತ ಒಂದು ವರ್ಗದವರು ವಾದಿಸಿದರೆ, ಇನ್ನೂ ಕೆಲವರು ಲವ್​ ಜಿಹಾದ್​ಗೆ ವಿರೋಧಿಸಿದಕ್ಕೆ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹಾಗೂ ಅವರ ಸಚಿವ ಸಂಪುಟದ ಸದಸ್ಯರು ನೀಡುತ್ತಿರುವ ಹೇಳಿಕೆ ವ್ಯಾಪಕ ಆಕ್ರೋಶಕ್ಕೆ ಗುರಿಯಾಗುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ಈ ಕುರಿತು ಮಾತನಾಡಿದ ಪರಮೇಶ್ವರ್, ನನ್ನ ಬಳಿ ಇದ್ದ ಮಾಹಿತಿ ಆಧರಿಸಿ ನಾನು ಹೇಳಿಕೆ ನೀಡಿದ್ದೆ. ನನ್ನ ಹೇಳಿಕೆಯಿಂದ ನೋವಾಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ತನಿಖೆ ನಡೆಯುತ್ತಿದೆ ಮತ್ತು ಅದು ಪೂರ್ತಿಗೊಂಡ ಬಳಿಕ ಸತ್ಯಾಸತ್ಯತೆ ಹೊರಬೀಳಲಿದೆ ಎಂದು ಹೇಳಿದ್ದಾರೆ.

ಬಿಜೆಪಿಯವರು ಈ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸುತ್ತಿದ್ದು, ಎಬಿವಿಪಿ ಅವರಿಗೆ ಇದಕ್ಕೆ ಸಂಬಂಧಿಸಿದಂತೆ ಮಾಹಿತಿ ಕೊರತೆ ಇರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ನಾನಾಗಲೀ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯಾಗಲೀ ಜವಾಬ್ದಾರಿಯುತ ಸ್ಥಾನಗಳಲ್ಲಿ ಇರುವವರು, ನಾವು ಹಗುರವಾದ ಹೇಳಿಕೆಗಳನ್ನು ನೀಡಲಾಗಲ್ಲ ಎಂದಿದ್ದಾರೆ.

ನಮ್ಮ ಬಳಿ ಇದ್ದ ಮಾಹಿತಿ ಆಧರಿಸಿ ಹೇಳಿಕೆ ಕೊಟ್ಟಿದ್ದೇವೆ. ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಗೃಹಸಚಿವ ಪರಮೇಶ್ವರ್ ನೇಹಾ ಕೊಲೆ ಪ್ರಕರಣದ ಕುರಿತ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net