ಕಾಂಗ್ರೆಸ್​ ಕಾರ್ಪೊರೇಟರ್​ ಪುತ್ರಿ ಕೊಲೆ​; ​ಇಂತಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ ಎಂದ ಗೃಹ ಸಚಿವರು

DR G Parameshwar
Published on

ತುಮಕೂರು: ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ್ ಹಿರೇಮಠ್ ಪುತ್ರಿ, ಬಿವಿಬಿ ಕಾಲೇಜು ಎಂಸಿಎ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಕೊಲೆ ಪ್ರಕರಣಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

ತುಮಕೂರಿನಲ್ಲಿ ಈ ಕುರಿತು ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಇಂತಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ. ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಎಂದು ಹೇಳಿದ್ದಾರೆ.

ಕೊಲೆಯಾದ ನೇಹಾ ಮತ್ತು ಆರೋಪಿ ಫಯಾಜ್​ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ನೇಹಾ ಫಯಾಜ್​ನಿಂದ ದೂರವಾಗಲು ಯತ್ನಿಸಿದ್ದಾಳೆ. ಇದರಿಂದ ಕೋಪಗೊಂಡ ಫಯಾಜ್​​ ನೇಹಾಳ ಕೊಲೆ ಮಾಡಿದ್ದಾನೆ. ಘಟನೆ ನಡೆದ ವೇಳೆ ಮಗಳ ಜೊತೆ ಇದ್ದ, ತಾಯಿ ಮೇಲೂ ಹಲ್ಲೆ ಮಾಡಲಾಗಿದೆ, ಆದರೆ ನೇಹಾ ತಾಯಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಲವ್ ಜಿಹಾದ್​ ಕಂಡು ಬಂದಿಲ್ಲ ನನ್ನನ್ನು ಬಿಟ್ಟು ಬೇರೆಯವನ್ನು ಮದುವೆ ಮಾಡಿಕೊಳ್ಳುತ್ತೀಯಾ ಅಂತ ಕೋಪದಲ್ಲಿ ಕೊಲೆ ಮಾಡಿದ್ದಾನೆ. ಇಂತಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ. ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net